- Advertisement -
Political News:
ಜೆಡಿಎಸ್ ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಇಲಾಖೆ ಅಭ್ಯರ್ಥಿಗಳು ಬೆಳ್ಳಂ ಬೆಳಿಗ್ಗೆ ಶಾಕ್ ನೀಡಿದ್ದಾರೆ. ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮೈಲಸಂದ್ರದಲ್ಲಿರುವ ಪ್ರಭಾಕರ ರೆಡ್ಡಿ ಮನೆ, ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಕಚೇರಿ ಸೇರಿದಂತೆ ಮೂರು ಕಡೆಗಳಲ್ಲಿ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದೆ.
ಪ್ರಭಾಕರ ರೆಡ್ಡಿ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿದ್ದು, ಇಂದು ಮುಂಜಾನೆ 6 ಗಂಟೆಗೆ ಐಟಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
- Advertisement -