Saturday, July 20, 2024

Latest Posts

ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿದ ಜೆಡಿಎಸ್ ಮುಖಂಡರು,ಕುತೂಹಲ ಕೆರಳಿಸಿದ ಮಾತುಕತೆ..?

- Advertisement -

ರಾಜ್ಯಸಭೆ ಚುನಾವಣೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಆಗಾಗಲೇ ಕಣಕ್ಕಿಳಿಸಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ನಾಮಪತ್ರವನ್ನು‌ ಸಲ್ಲಿಸಿದ್ದು.ಈ‌ ನಡುವೆಯೇ ಜೆಡಿಎಸ್ ನಾಯಕರು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಬುಧವಾರ ಸಿದ್ದರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ವಿಧಾನಪರಿಷತ್ ಸದಸ್ಯರಾದ ಟಿ.ಎ ಶರವಣ ಹಾಗೂ ಬಿಎಂ ಫಾರೂಕ್ ಕೆಲ ಹೊತ್ತು ಸಿದ್ದರಾಮಯ್ಯ ಇವರ ಜೊತೆ ಮಾತುಕತೆ ನಡೆಸಿದರು. ರಾಜ್ಯಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಈ ಭೇಟಿಯು ಬಳಹ ಮಹತ್ವ ಪಡೆದುಕೊಂಡಂತಾಗಿದೆ.

ಇನ್ನೂ ರಾಜ್ಯಸಭೆ ಚುನಾವಣೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಮನ್ಸೂರ್ ಅಲಿ ಖಾನ್ ನಾಮಪತ್ರವನ್ನು‌ ಸಲ್ಲಿಕೆ ಮಾಡಿದರೆ ಜೆಡಿಎಸ್ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣಕ್ಕಿಳಿದಿದ್ದಾರೆ.

ಈಗಾಗಲೇ ಜೆಡಿಎಸ್ ಮುಖಂಡರು ನಮ್ಮ ಅಭ್ಯರ್ಥಿಗೆ ಬೆಂಬಲ ನೀಡಬೇಕು ಎಂಬ ಮನವಿಯನ್ನು ಕಾಂಗ್ರೆಸ್ ಗೆ ಮಾಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಕೂಡಾ ಕುಪೇಂದ್ರ ರೆಡ್ಡಿಯನ್ನು ಬೆಂಬಲ ಮಾಡಬೇಕು ಎಂದು ಕಾಂಗ್ರೆಸ್ ಗೆ ಬಹಿರಂಗ ಮನವಿಯನ್ನು ಮಾಡಿದ್ದಾರೆ.

ನಮ್ಮ ಅಭ್ಯರ್ಥಿಗೆ ಬೆಂಬಲ ನೀಡುವ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಜೊತೆಗೂ ಮಾತುಕತೆ ಮಾಡಿದ್ದೇವೆ ಎಂಬುವುದು ಜೆಡಿಎಸ್ ವಾದವಾಗಿದೆ.
ಸದ್ಯ ಈ‌ ನಡುವೆ ಪರಿಷತ್ ಸದಸ್ಯರಾದ ಶರವಣ ಹಾಗೂ ಬಿಎಂ ಫಾರೂಕ್ ಬುಧವಾರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಕರ್ನಾಟಕ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಹಾಲಿ ಸದಸ್ಯರಾದ, ಹಣಕಾಸು ಸಚಿವರೂ ಆದ ನಿರ್ಮಲಾ ಸೀತಾರಾಮನ್‌, ಚಿತ್ರನಟ ಜಗ್ಗೇಶ್‌ ಹಾಗೂ ಲೆಹರ್‌ ಸಿಂಗ್‌ ನಾಮಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ನಿಂದ ಜೈರಾಮ್‌ ರಮೇಶ್‌ ಅವರ ಜತೆ ಎರಡನೇ ಅಭ್ಯರ್ಥಿಯಾಗಿ ಮನ್ಸೂರ್‌ ಅಲಿ ಖಾನ್‌ ಅವರನ್ನು ಕಣಕ್ಕಿಳಿಸಿದೆ. ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಅಭಿಜಿತ್ ಕರ್ನಾಟಕ ಟಿವಿ ಬೆಂಗಳೂರು.

- Advertisement -

Latest Posts

Don't Miss