- Advertisement -
ಹಾಸನ: ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಶಾಸಕ ಪ್ರೀತಂ ಜೆ.ಗೌಡ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಾಸನದಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು. ತಾಲೂಕು ಜೆಡಿಎಸ್ ಅಧ್ಯಕ್ಷ ಎಸ್.ದ್ಯಾವೇಗೌಡ, ಮುಖಂಡರಾದ ಆರ್.ಟಿ.ದ್ಯಾವೇಗೌಡ, ಬಿ.ಆರ್.ಕರಿಗೌಡ, ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದೆ.
ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟು ಎನ್.ಆರ್.ವೃತ್ತದ ಮೂಲಕ ಡಿಸಿ ಕಚೇರಿ ವರೆಗೆ ಪ್ರತಿಭಟನಾಕಾರರು ಬೃಹತ್ ಮೆರವಣಿಗೆ ನಡೆಸಿದ್ಧಾರೆ. ಅಲ್ಲದೇ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ಶಾಸಕ ಪ್ರೀತಂ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದು, ನಶೆ ಹೇಳಿಕೆ ನೀಡಿರುವ ಶಾಸಕರು ಕ್ಷಮೆ ಯಾಚಿಸಲು ಆಗ್ರಹಿಸಿದ್ದಾರೆ.
- Advertisement -