- Advertisement -
state news :
ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿರುವಾಗಲೇ ಹಾಸನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರಿಗೆ ಟಿಕೆಟ್ ನೀಡದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಮನೆಗೆ ಸಾವಿರಾರು ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕೆಲವು ತಿಂಗಳಿನಿಂದ ಜೆಡಿಎಸ್ ಪಕ್ಷದಿಂದ ಎ.ಟಿ.ರಾಮಸ್ವಾಮಿ ಅಂತರ ಕಾಯ್ದುಕೊಂಡಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ಅರಕಲಗೂಡಿನ ಎ.ಟಿ.ರಾಮಸ್ವಾಮಿ ಮನೆಗೆ ತೆರಳಿ ಮಾತುಕತೆ ನಡೆಸಿದ್ದರು. ಆನಂತರ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಎ.ಟಿ.ರಾಮಸ್ವಾಮಿ ಹೇಳಿಕೆ ನೀಡಿದ್ರು. ನಾಳೆ ಅರಕಲಗೂಡಿಗೆ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ಆಗಮಿಸುತ್ತಿರುವ ಹಿನ್ನಲೆ ಇಂದು ಹೊಳೆನರಸೀಪುರದ ಎಚ್.ಡಿ.ರೇವಣ್ಣ ಮನೆಗೆ ಮುತ್ತಿಗೆ ಹಾಕಿ ಶಾಸಕ ಎ.ಟಿ.ರಾಮಸ್ವಾಮಿ ವಿರುದ್ಧ ಸಾವಿರಾರು ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.
- Advertisement -