Political News: ಜೆಡಿಎಸ್ ಪಕ್ಷ ಅಸ್ತಿತ್ವಕ್ಕೆ ಬಂದು 25 ವರ್ಷವಾಗಿದೆ. ಹೀಗಾಗಿ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ನಡೆದಿದ್ದು, ನಿಖಿಲ್ ಕುಮಾರ್, ಕುಮಾರಸ್ವಾಮಿ, ಮಾಜಿ ಪ್ರಧಾನಿ ದೇವೇಗೌಡರು ಸೇರಿ ಹಲವು ಜೆಡಿಎಸ್ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಈ ವೇಳೆ ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ದೇವೇಗೌಡರು ಆಯ್ಕೆಯಾದರೆ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಅವರು ಮರು ಆಯ್ಕೆಯಾಗಿದ್ದಾರೆ. ಇದೇ ವೇಳೆ ಜೆಡಿಎಸ್ ಪಕ್ಷದ ಬೆಳ್ಳಿ ನಾಣ್ಯ ಲೋಕಾರ್ಪಣೆ ಮಾಡಲಾಯಿತು.
ಈ ವೇಳೆ ಮಾತನಾಡಿರುವ ದೇವೇಗೌಡರು, ಜೆಡಿಎಸ್ ಪಕ್ಷದ ಕಥೆ ಮುಗೀತು ಅಂತಲೇ ಹಲವರು ತಿಳಿದಿದ್ದಾರೆ. ಆದರೆ ನಾವು ಫಿನಿಕ್ಸ್ ಪಕ್ಷಿಯಂತೆ ಮತ್ತೆ ಮೇಲೆದ್ದು ಬರುತ್ತೇವೆ ಎಂದು ಪ್ರತಿಪಕ್ಷಗಳಿಗೆ ಸವಾಲ್ ಹಾಕಿದ್ದಾರೆ. ಅಲ್ಲದೇ ಪಕ್ಷಕ್ಕಾಗಿ ದುಡಿಯುವ ಶಕ್ತಿ ಇದೆ ನನಗೆ. ನಾನು ಪ್ರಚಾರಕ್ಕಾಗಿ, ಪಕ್ಷದ ಕೆಲಸಕ್ಕಾಗಿ ಬೇರೆ ಬೇರೆ ಜಿಲ್ಲೆಗಳಿಗೆ ಹೋಗುತ್ತೇನೆ ಎಂದು ಹೆಚ್ಡಿಡಿ ಹೇಳಿದ್ದಾರೆ.
ನನಗೆ ಉತ್ತಮ ಆರೋಗ್ಯ, ಆಯುಷ್ಯ, ಜ್ಞಾಪಕ ಶಕ್ತಿಯನ್ನು ಭಗವಂತ ನೀಡಿದ್ದಾರೆ. ಪಕ್ಷದ ವಿಷಯದ ಬಗ್ಗೆ ಸವಿಸ್ತಾರವಾಗಿ ಮಾತನಾಡಿುವ ಶಕ್ತಿ ಇದೆ. ಇನ್ನೂ ಅನೇಕ ಜನಪರ ಕಾರ್ಯಕ್ರಮಗಳನ್ನು ಮಾಡಲಿದ್ದೇವೆ ಎಂದು ದೇವೇಗೌಡರು ಹೇಳಿದ್ದಾರೆ.




