Saturday, November 29, 2025

Latest Posts

ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

- Advertisement -

ಭೂ ಸುಧಾರಣಾ ಕಾಯ್ದೆ ವಿರುದ್ಧ ಕೋಲಾರದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದ್ರು. ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ನೆತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೋಲಾರದ ತಾಲೂಕು ಕಚೇರಿ ಮುಂಭಾಗ ಪ್ರೊಟೆಸ್ಟ್ ಮಾಡಲಾಯಿತು.

ಪ್ರಗತಿಪರ, ರೈತಪರ, ಕಾರ್ಮಿಕ ಪರ ಇರುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಇದು ರೈತ ಹಾಗೂ ಕಾರ್ಮಿಕರಿಗೆ ಧಕೆ ತರುವಂತ ಕಾಯ್ದೆಗಳಾಗಿವೆ. ಹಾಗಾಗಿ ತಕ್ಷಣ ರಾಜ್ಯ ಸರ್ಕಾರ ಸುಗ್ರಿವಾಘ್ನೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳಾದ ಸತ್ಯಭಾಮಾರವರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ನೇತೃತ್ವದ ತಂಡ ಮನವಿ ಪತ್ರವನ್ನು ನೀಡಿದ್ರು. ತಕ್ಷಣ ಮನವಿಯನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು ರೈತ ವಿರೋಧಿ ಕಾಯ್ದೆಗಳನ್ನು ತಿದ್ದುಪಡಿ ತರುವಂತೆ ಮನವಿ‌ ಮಾಡಿದ್ರು.

ಇನ್ನು ಪ್ರತಿಭಟನೆಯಲ್ಲಿ ಕಾರ್ಯಕರ್ತರು ಯಾವುದೇ ಸಾಮಾಜೀಕ ಅಂತರ ಕಾಯ್ದುಕೊಂಡಿರಲಿಲ್ಲ. ಪೊಲೀಸರು ಎಷ್ಟೇ ಮನವಿ ಮಾಡಿದ್ರು ಸಹ ಕಾರ್ಯಕರ್ತು ಕ್ಯಾರೆ ಅಂದಿಲ್ಲ. ಜಿಲ್ಲಾಧಿಕಾರಿಗಳು ಸಹ ಜೆಡಿಎಸ್ ಕಾರ್ಯಕರ್ತರ ಮೇಲೆ ಎಲ್ಲರು ಅಂತರ ಕಾಯ್ದುಕೊಳ್ಳುವಂತೆ ಸಲಹೆ ನೀಡಿದ್ರು.

ಇನ್ನು ನರಸಾಪುರದಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ಐಪೋನ್ ಕಂಪನಿ ವಿರುದ್ಧವು ಸಹ ಗುಡುಗಿದ್ರು. ಜಿಲ್ಲೆಯ ಯುವಕರಿಗೆ ಸುಮಾರು 90ಭಾಗ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದ್ರು. ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.
ನಾಗೇಶ್ ಹುಲಿದೇನುಹಳ್ಳಿ, ಕರ್ನಾಟಕ ನ್ಯೂಸ್ ಕೋಲಾರ

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss