Hubli News: ಹುಬ್ಬಳ್ಳಿ: ಹಾಸನ ಸಂಸದ ರೇವಣ್ಣ ಪ್ರಜ್ವಲ್ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಫೆಕ್ ವಿಡಿಯೋ ಹಾಗೂ ಸುಳ್ಳು ದಾಖಲೆ ಸೃಷ್ಟಿ ಮಾಡಿ ನೀಚ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಾಗೂ ಡಿಸಿಎಂ ಡಿಕೆ ಶಿವಕುಮಾರನ್ನು ತಕ್ಷಣವೇ ಸಂಒಉಟದಿಂದ ವಜಾ ಮಾಡಲು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ನಗರದ ಚೆನ್ನಮ್ಮ ವೃತ್ತದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ್ ಹುಣಸಿಮರದ ಹಾಗೂ ಗ್ರಾಮಾಂತರ ಜಿಲ್ಲಾಧ್ಯಕ್ಷ ಬಿ ಬಿ ಗಂಗಾಧರಮಠ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಡಿಕೆ ಶಿವಕುಮಾರ ಸೇರಿ ಸಿಎಂ ವಿರುದ್ಧ ಧಿಕ್ಕಾರ ಕೂಗಿದರು. ಇದೆ ವೇಳೆ ಡಿಸಿಎಂ ಡಿಕೆಶಿ ಹಾಗೂ ಸಿಎಂ ಸಿದ್ದರಾಮಯ್ಯ ಅವರ ಭಾವಚಿತ್ರವಿರುವ ಫ್ಲಕ್ಸ್ ಕಾರ್ಟ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.
ನಮ್ಮ ಪಕ್ಷದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಿಂದೆ ನೀಚ ರಾಜಕಾರಣ ನಡೆದಿದೆ. ಇದರ ಹಿಂದೆ ಡಿಸಿಎಂ ಡಿಕೆಶಿವಕುಮಾರ ಅವರು ನೀಚ ರಾಜಕಾರಣ ಕೈವಾಡವಿದೆ. ಈ ಪ್ರಕರಣದಲ್ಲಿ ಡಿಸಿಎಂ ಹಾಗೂ ಸಿಎಂ ಅವರು ಸುಳ್ಳು ದಾಖಲೆ ಜತೆಗೆ ಫೆಕ್ ವಿಡಿಯೋ ಸೃಷ್ಟಿ ಮಾಡಿ, ಮಹಿಳೆಯರ ಮಾನವನ್ನು ಲೆಕ್ಕಿಸದೇ ಕೆಲಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಈ ಕೂಡಲೇ ಸಿಎಂ ಸಿದ್ದರಾಮಯ್ಯನವರು ಡಿಸಿಎಂ ಡಿಕೆಶಿರನ್ನು ಸಂಪುಟದಿಂದ ವಜಾ ಮಾಡವಂತೆ ಅಗ್ರಹಿಸಿದರು. ಇಲ್ಲವಾದಲ್ಲಿ ರಾಜ್ಯವ್ಯಾಪಿ ಉಗ್ರವಾದ ಹೋರಾಟ ಮಾಡುವುದಾಗಿ ಇದೇವೇಳೆ ಎಚ್ಚರಿಕೆ ನೀಡಿದರು.
ಗೆಲ್ಲುವ ಭರವಸೆ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ: ರಿಲ್ಯಾಕ್ಸ್ ಮೂಡ್‌ನಲ್ಲಿ..!
ಕಾಂಗ್ರೆಸ್ ನಾಯಕರ ವಿರುದ್ಧ ಬೆಂಗಳೂರಿನ ಬಸ್‌ಸ್ಟ್ಯಾಂಡ್‌ನಲ್ಲಿ ರಾರಾಜಿಸಿದ ಪೋಸ್ಟರ್‌ಗಳು