Bengaluru News: ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹಾಸನದ ಟಿ.ಎಂ.ಧನುಷ್ ಪ್ರಥಮ ಸ್ಥಾನ ಪಡೆದಿದ್ದಾರೆ.
ಹುಬ್ಬಳ್ಳಿಯ ಸಾನ್ವಿ ಎರಗೊಪ್ಪಾ ಹಾಗೂ ಶಿರಸಿಯ ಗೋಕುಲ್ ಬಾಲಚಂದ್ರ ಇಬ್ಬರೂ ದ್ವಿತೀಯ ಸ್ಥಾನ ಪಡೆದಿದ್ದಾರೆ. 20 ಮಕ್ಕಳು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.
ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಕಚೇರಿಯಲ್ಲಿ ವಿಜೇತ್ ಮಕ್ಕಳಿಗೆ ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವರು; ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗದ ವತಿಯಿಂದ ಏರ್ಪಡಿಸಲಾಗಿದ್ದ ಸಂಕ್ರಾಂತಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಎಲ್ಲಾ ಚಿಣ್ಣರಿಗೂ ಹಾರ್ದಿಕ ಶುಭಾಶಯಗಳು. ಗೆದ್ದ ಮಕ್ಕಳಿಗೆ ಪ್ರಶಸ್ತಿ ವಿತರಣೆ ಮಾಡಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಮಕ್ಕಳೆಲ್ಲರಿಗೂ ಶುಭವಾಗಲಿ. ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದರು.
ಅಲ್ಲದೆ, ಇಂಥ ಅರ್ಥಪೂರ್ಣ ಸ್ಪರ್ಧೆಯನ್ನು ಆಯೋಜಿಸಿದ್ದ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಚಂದನ್ ಮತ್ತವರ ತಂಡವನ್ನು ಕೇಂದ್ರ ಸಚಿವರು ಅಭಿನಂದಿಸಿದ್ದಾರೆ.
ಈ ಸಂದರ್ಭದಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಉಪಸ್ಥಿತರಿದ್ದರು.