ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸಾಗರ್ ಮಾಲಾ ರಸ್ತೆ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹಾವೇರಿ ಮಾರ್ಗವಾಗಿ ಸಿರ್ಸಿಗೆ ಸಂಪರ್ಕ ಕಲ್ಪಿಸುವ ಸಾಗರ್ ಮಾಲಾ ರಸ್ತೆಯ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಕಾಮಗಾರಿ ಹೊಣೆ ಹೊತ್ತಿರುವ ಏಜೆನ್ಸಿಯ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ರಸ್ತೆ ಕಾಮಗಾರಿಗೆ ಹಣ ಬಿಡುಗಡೆಯಾಗಿದ್ದರೂ ಸಹ, ಕಾಮಗಾರಿ ಪೂರ್ಣಗೊಳಿಸುವಲ್ಲಿ ಏಜೆನ್ಸಿ ನಿರ್ಲಕ್ಷ್ಯ ತೋರಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ವೇಳೆ ಜೆಡಿಎಸ್ ತಾಲೂಕು ಅಧ್ಯಕ್ಷ R.B. ಪಾಟೀಲ್ ಮಾತನಾಡಿ, ಒಂದು ವಾರದೊಳಗೆ ರಸ್ತೆ ಕಾಮಗಾರಿಯನ್ನು ಸರಿಪಡಿಸಿ ಪೂರ್ಣಗೊಳಿಸುವಂತೆ ಆಗ್ರಹಿಸಿದರು. ಇಲ್ಲವಾದರೆ ಇನ್ನಷ್ಟು ತೀವ್ರವಾದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ವರದಿ : ಲಾವಣ್ಯ ಅನಿಗೋಳ




