Saturday, October 12, 2024

Latest Posts

15 ನಿಮಿಷ ಗಳಗಳನೆ ಅತ್ತಿದ್ದರಂತೆ ಮಾಜಿ ಸಿಎಂ ಕುಮಾರಸ್ವಾಮಿ..!

- Advertisement -

ಬೆಂಗಳೂರು: ಸಮ್ಮಿಶ್ರ ಸರ್ಕಾರಾವಧಿಯಲ್ಲಿ ಸಿಎಂ ಆಗಿದ್ದ ವೇಳೆ ನನ್ನ ಮಗ ಕುಮಾರಸ್ವಾಮಿ 15 ನಿಮಿಷಗಳ ಕಾಲ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ಅಂತ ಜೆಡಿಎಸ್ ವರಿಷ್ಠ ದೇವೇಗೌಡ ಬಹಿರಂಗ ಪಡಿಸಿದ್ದಾರೆ.

ಜೆಡಿಎಸ್ ಮುಖಂಡರೊಂದಿಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ, ನನ್ನ ಮಗ ಎಚ್.ಡಿ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದಾಗ ಎಷ್ಟು ಕಷ್ಟಪಟ್ಟಿದ್ದಾರೆ ಅಂತ ನನಗೆ ಚೆನ್ನಾಗಿ ಗೊತ್ತು. ಒಂದು ದಿನ ಕುಮಾರಸ್ವಾಮಿ ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ ಭವನದಲ್ಲಿ ಕುಳಿತು ಸುಮಾರು 15 ನಿಮಿಷಗಳ ಕಾಲ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ಅಂತ ದೇವೇಗೌಡರು ಹೇಳಿದ್ದಾರೆ. ಇನ್ನು ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಅಂತ ಸ್ಪಷ್ಟಪಡಿಸಿದ್ರು.

ಬಳಿಕ ಮಾತನಾಡಿದ ದೇವೇಗೌಡರು, ನಿನ್ನೆ ಅಧಿಕಾರ ಸ್ವೀಕಾರ ಮಾಡಿದ ಸಿಎಂ ಯಡ್ಯೂರಪ್ಪ, ತಾವು ದ್ವೇಷದ ರಾಜಕಾರಣ ಮಾಡಲ್ಲ ಅಂತ ನೀಡಿದ್ದ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ, ಇದು ಒಳ್ಳೆಯ ಬೆಳವಣಿಗೆ ಎಂದರು. ಅಲ್ಲದೆ ರಾಜ್ಯಕ್ಕೆ ಒಳ್ಳೆಯ ಕೆಲಸಗಳಿಗೆ ಸದಾ ನಮ್ಮ ಬೆಂಬಲವಿರುತ್ತೆ. ಆದ್ರೆ ಹಾನಿಯಾಗೋ ಕೆಲಸಗಳನ್ನು ನಾವು ಕಟ್ಟಿನಿಟ್ಟಾಗಿ ವಿರೋಧಿಸುತ್ತೇವೆ ಎಂದರು.

ಇನ್ನು ಜೆಡಿಎಸ್ ಬಿಜೆಪಿಗೆ ಬಾಹ್ಯ ಬೆಂಬಲ ನೀಡುವ ಕುರಿತಾಗಿ ಜಿ.ಟಿ ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ಗೌಡರು, 14 ತಿಂಗಳಿಗೇ ಮನೆಗೆ ಹೋಗಬೇಕಾಯಿತಲ್ಲ ಎಂಬ ನೋವಿನಿಂದ ಈ ರೀತಿ ಹೇಳಿರಬಹುದು, ಇದನ್ನೇ ದೊಡ್ಡ ವಿಚಾರ ಮಾಡುವ ಅಗತ್ಯವಿಲ್ಲ. ಜಿಟಿಡಿ ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರಷ್ಟೇ ಅಂತ ಇದೇ ವೇಳೆ ದೇವೇಗೌಡರು ಸ್ಪಷ್ಟನೆ ನೀಡಿದ್ರು.

- Advertisement -

Latest Posts

Don't Miss