Saturday, October 5, 2024

Latest Posts

ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ ಫಿಕ್ಸ್..!

- Advertisement -

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡ ನೂತನ ರಾಜ್ಯಾಧ್ಯಕ್ಷ, ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಿದ್ದಾರೆ.

ಮೈತ್ರಿ ಸರ್ಕಾರದ ಮೇಲೆ ಮುನಿಸಿಕೊಂಡು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಇದೀಗ ಪಕ್ಷದ ವರಿಷ್ಠ ನೂತನ ಪದಾಧಿಕಾರಿಗಳನ್ನು ನೇಮಿಸಲಿದ್ದಾರೆ. ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ ಹಾಗೂ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಮಧು ಬಂಗಾರಪ್ಪ ಹೆಸರನ್ನು ಬಹುತೇಕ ಖಚಿತಗೊಳಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ನಾಳೆ ದೇವೇಗೌಡರು ಅಧಿಕೃತವಾಗಿ ಘೋಷಣೆ ಮಾಡಲಿದ್ದು, ಪಕ್ಷದ ನಿರ್ಗಮಿತ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಜೆಡಿಎಸ್ ಬಾವುಟವನ್ನು ನೂತನ ರಾಜ್ಯಾಧ್ಯಕ್ಷರಿಗೆ ಹಸ್ತಾಂತರಿಸಲಿದ್ದಾರೆ ಎನ್ನಲಾಗಿದೆ.

ಇನ್ನು ರಾಜೀನಾಮೆ ನೀಡಿದ ಬಳಿಕ ಮಾತನಾಡಿದ್ದ ಎಚ್.ವಿಶ್ವನಾಥ್, ಮಧು ಬಂಗಾರಪ್ಪಾಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ರೆ ಓಬಿಸಿ ವರ್ಗಕ್ಕೆ ಅವಕಾಶ ಸಿಗುತ್ತೆ. ಅವರಿಗೆ ನಾನೇ ಬಾವುಟ ಹಸ್ತಾಂತರ ಮಾಡ್ತೇನೆ ಅಂತ ಹೇಳಿದ್ದರು.

ಕೋಡೀಮಠದ ಶ್ರೀಗಳು ಹೇಳಿದ್ದ ಭವಿಷ್ಯ ನಿಜವಾಗುತ್ತಾ..?ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=knQ5ET_3P2c
- Advertisement -

Latest Posts

Don't Miss