Monday, September 9, 2024

Latest Posts

ಮೈತ್ರಿಯಲ್ಲಿ ಅಲ್ಲೋಲ ಕಲ್ಲೋಲ- ಇಂದು ಜೆಡಿಎಸ್ ಅಂತಿಮ ನಿರ್ಧಾರ..!

- Advertisement -

ಬೆಂಗಳೂರು: ಶಾಸಕರ ರಾಜೀನಾಮೆ ನೀಡಿರೋದ್ರಿಂದ ಮೈತ್ರಿ ಸರ್ಕಾರ ಅಸ್ಥಿರವಾಗಿರೋ ಹಿನ್ನೆಲೆಯಲ್ಲಿ ಜೆಡಿಎಸ್ ಆತಂಕದಲ್ಲಿದೆ. ಹೀಗಾಗಿ ಜೆಡಿಎಸ್ ಇಂದು ತನ್ನ ಅಂತಿಮ ನಿರ್ಧಾರ ಕೈಗೊಳ್ಳೋದಕ್ಕೆ ಜೆಡಿಎಲ್ ಪಿ ಸಭೆ ಕರೆದಿದೆ.

ಮೈತ್ರಿ ಅಭದ್ರಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಾಳಯಗಳಲ್ಲಿ ಬಿರುಸಿನ ಚಟುವಟಿಕೆಗಳು ಗರಿಗೆದರಿವೆ. ಇನ್ನು ಕಾಂಗ್ರೆಸ್ ರಾಜೀನಾಮೆ ನೀಡಿರೋ ಶಾಸಕರ ಮನವೊಲಿಕೆ ಯತ್ನ ಮಾಡುತ್ತಿದ್ರೆ, ಈ ಎಲ್ಲಾ ಬೆಳವಣಿಗೆಗಳಿಂದ ಬೇಸತ್ತ ಜೆಡಿಎಸ್, ಮೈತ್ರಿ ಕುರಿತಾಗಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಈ ನಿಟ್ಟಿನಲ್ಲಿ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರೋ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಶಾಸಕಾಂಗ ಪಕ್ಷದ ಸಭೆ ಏರ್ಪಡಿಸಲಾಗಿದೆ. ಪಕ್ಷದ ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಜೆಡಿಎಸ್ ವರಿಷ್ಠ ದೇವೇಗೌಡರು ಮೈತ್ರಿ ಮುಂದುವರಿಸಬೇಕೋ ಬೇಡವೋ ಎನ್ನುವ ಕುರಿತಂತೆ ತಮ್ಮ ನಿರ್ಧಾರ ಪ್ರಕಟಿಸಲಿದ್ದಾರೆ. ಹೀಗಾಗಿ ಈಗಾಗಲೇ ಜೆಡಿಎಸ್ ಶಾಸಕರು ಬೆಂಗಳೂರಿನತ್ತ ಧಾವಿಸುತ್ತಿದ್ದಾರೆ.

ನಿಜ ಆಗೇ ಬಿಡುತ್ತಾ ಕೋಡಿಶ್ರೀಗಳು ನುಡಿದ ಭವಿಷ್ಯ…??ಮಿಸ್ ಮಾಡದೇ ಈ ವಿಡಿಯೋ ನೋಡಿ

https://www.youtube.com/watch?v=knQ5ET_3P2c
- Advertisement -

Latest Posts

Don't Miss