Thursday, December 12, 2024

Latest Posts

ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ ಇಲ್ಲ…! ಏನಿದು ಜೆಡಿಎಸ್ ಗುಡುಗು..?!

- Advertisement -

State News:

Feb:27:ಆರೋಗ್ಯ ಸಚಿವ ಕೆ.ಸುಧಾಕರ್ ವಿರುದ್ಧ ಜೆಡಿಎಸ್ ಟ್ವೀಟ್ ಮೂಲಕ  ಸಮರ  ಸಾರಿದೆ. ದೊಡ್ಡಬಳ್ಳಾಪುರದಲ್ಲಿ ಆ್ಯಂಬುಲೆನ್ಸ್ ಸೇವೆ ಅಸ್ತವ್ಯಸ್ತವಾಗಿದ್ದು, ಆ್ಯಂಬುಲೆನ್ಸ್ ಸೇವೆ ಸರಿಯಾಗಿ ದೊರೆಯದೆ ಜನರು ಪರದಾಡುತ್ತಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿ ಈ ಬಗ್ಗೆ ಸರಣಿ ಟ್ವೀಟ್ ಮಾಡಿ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಆರೋಗ್ಯ ಸಚಿವರನ್ನು ‘ಮೋಜುಗಾರ-ಸೊಗಸುಗಾರ’ ಎಂದು ವ್ಯಂಗ್ಯವಾಡಿದ್ದಾರೆ.

“ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವರೂ ತಾವೇ ಆಗಿರುವಾಗ, ಆ್ಯಂಬುಲೆನ್ಸ್ ಸೇವೆ ಸರಿಯಾಗಿ ದೊರೆಯದೆ ಇರುವುದು ದುರಂತವಲ್ಲದೆ ಇನ್ನೇನು? ರಾಜ್ಯದ ‘ಪ್ರಭಾವಿ’ ಸಚಿವರಾಗಿ ಕನಿಷ್ಠ ಆರೋಗ್ಯ ಸೇವೆ ಒದಗಿಸಲು ಸಾಧ್ಯವಿಲ್ಲದಿರುವುದು ನಾಚಿಕೆಗೇಡು. ರಾಜ್ಯ ಸರ್ಕಾರಕ್ಕಂತೂ ಮರ್ಯಾದೆ ಇಲ್ಲ,ವಾರದ ಹಿಂದೆ ದೊಡ್ಡವೆಂಗಲದಲ್ಲಿ ನಡೆದ ಜೋಡಿ ಕೊಲೆ ಸಂದರ್ಭದಲ್ಲಿ ಸೂಕ್ತ ಸಮಯಕ್ಕೆ ಆ್ಯಂಬುಲೆನ್ಸ್ ಸೇವೆ ದೊರೆತಿದ್ದರೆ ಚಾಕು ಇರಿತಕ್ಕೆ ಒಳಗಾದವರನ್ನು ಉಳಿಸಿಕೊಳ್ಳಬಹುದಿತ್ತು. ಇದು ಸೇರಿ ತಾಲ್ಲೂಕಿನಲ್ಲಿ ಆ್ಯಂಬುಲೆನ್ಸ್ ಸೇವೆ ಇದ್ದೂ ಇಲ್ಲದಂತಾಗಿರುವುದು ಆರೋಗ್ಯ ಸಚಿವಾಯಲದ ನಿಷ್ಕ್ರಿಯತೆ ಎದ್ದು ಕಾಣುವಂತಿದೆ. ಇದ್ದ ಆ್ಯಂಬುಲೆನ್ಸ್ ಗಳಲ್ಲಿ ಕೆಲವು ದುರಸ್ತಿಗಾಗಿ ಗ್ಯಾರೇಜ್ ಸೇರಿದ್ದವು. ತಿಂಗಳುಗಳ ನಂತರವೂ ಅವೆಲ್ಲ ಸೇವೆಗೆ ವಾಪಸ್ಸಾಗಿಲ್ಲ. ಈ ಸಂಗತಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ನೌಕರರೇ ತಿಳಿಸಿದ್ದಾರೆ. ಜನರ ಪ್ರಾಣ ರಕ್ಷಣೆ ಇಷ್ಟು ಲಘುವಾದ ವಿಷಯವೆ? ಲಜ್ಜೆಗೆಟ್ಟ ಸರ್ಕಾರಕ್ಕೆ ಆತ್ಮಸಾಕ್ಷಿ ಇಲ್ಲದ ಆರೋಗ್ಯ ಸಚಿವ ಎಂಬಂತಾಗಿದೆ. “ಎಂಬುವುದಾಗಿ ಸರಣಿ ಟ್ವೀಟ್ ಮಾಡಿ ಆರೋಗ್ಯ ಸಚಿವ ಕೆ ಸುಧಾಕರ್ ವಿರುದ್ಧವಾಗಿ ಟ್ವೀಟ್ ಮಾಡಿ ಜೆಡಿಎಸ್ ಗುಡುಗಿದೆ.

- Advertisement -

Latest Posts

Don't Miss