ಕೇಂದ್ರ ಸರ್ಕಾರ ಅಧೀನದ ಇಂಧನ ಸಂಸ್ಥೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ 469 ಕಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ.
ಹೌದು, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿ ಡಾಟಾ ಎಂಟ್ರಿ ಆಪರೇಟರ್ಸ್, ಕಿರಿಯ ಇಂಜಿನಿಯರ್, ಸಹಾಯಕರು, ಜ್ಯೂನಿಯರ್ ಕಂಟ್ರೋಲ್ ಆಸಿಸ್ಟೆಂಟ್ ಮತ್ತು ಜ್ಯೂನಿಯರ್ ಆಸಿಸ್ಟೆಂಟ್, ನರ್ಸಿಂಗ್ ಹುದ್ದೆಗಳ ಭರ್ತಿಗೆ ಸಂಸ್ಥೆ ಪ್ರಕಟಣೆ ಹೊರಡಿಸಿದೆ.
ಇದಕ್ಕೆ 18 ವರ್ಷದಿಂದ 26 ವರ್ಷದೊಳಗಿನ ಯುವಕ ಯುವತಿಯರಿಗೆ ಆದ್ಯತೆ ನೀಡಲಾಗಿದೆ. 12ನೇ ತರಗಿತಿ ಯಿಂದ ಪದವೀಧರರು ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಇನ್ನು ಟ್ರೇಡ್ ಅಪ್ರೆಂಟಿಸ್ ಗೆ ಸ್ನಾತಕೋತ್ತರ ಪದವಿ, ಟೆಕ್ನಿಷಿಯನ್ ಅಪ್ರೆಂಟಿಸ್ ಗೆ ಇಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸೋದಕ್ಕೆ ಆಗಸ್ಟ್ 24 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ಅಧಿಕೃತ ವೆಬ್ ಸೈಟ್ WWW.IOC.COM ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಹುದಾಗಿದೆ.