ಕೋಲಾರ : ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೀಜಿಸಲಾಗಿದ್ದ ೭೭ ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಆಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ರವರು ಧ್ವಜಾರೋಣ ನೆರವೇರಿಸಿದರು.
ಧ್ವಜಾರೋಹಣದ ನಂತರ ಶಾಲಾ ಮಕ್ಕಳಿಂದ ಆಕರ್ಷಕ ಪಥಸಂಚಲನ ಮಾಡಲಾಯಿತು. ಜಿಲ್ಲಾಉಸ್ತುವಾರಿ ಸಚಿವರಾದ ಬೈರತಿ ಬಸವರಾಜ ಅವರು ಪಥಂಚಲನ ವೀಕ್ಷಣೆ ಮಾಡಲು ಹೆಲಿಕಾಪ್ಟರ್ ಅನ್ನು ನಿಯೋಜನೆ ಮಾಡಿದರು ಹೆಲಿಕಾಪ್ಟರ್ ನಿಂದ ಪಥಸಂಚಲನಕ್ಕೆ ಪುಷ್ಪಾರ್ಚನೆ ಮಾಡಿದರು.
೭೭ ನೇ ಸ್ವಾತಂತ್ರ್ಯ ದಿನಾಚರಣೆಗೆ ಹೆಲಿಕಾಪ್ಟರ್ ಪ್ರಮುಖ ಆಕರ್ಷಣಿಯವಾಗಿತ್ತು.ಧ್ವಜಾರೋಹಣ ನಂತರ ಸಚಿವರಿಂದ ಜಿಲ್ಲೆಯ ಅಭಿವೃದ್ಧಿ ಕುರಿತು ವಿವರಣೆ ನೀಡಿದರು.ಕಾರ್ಯಕ್ರಮದಲ್ಲಿ ಡಿಸಿ ಅಕ್ರಂ ಪಾಷಾ, ಎಸ್.ಪಿ ನಾರಾಯಣ್ ಎಂಎಲ್ಸಿ ಗೋವಿಂದರಾಜು, ಸಂಸದ ಎಸ್ ಮುನಿಸ್ವಾಮಿ, ಶಾಸಕ ಕೊತ್ತೂರು ಮಂಜುನಾಥ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
DK.Shivakumar: ಬ್ರಿಟೀಷರ ವಿರುದ್ಧದ ಹೋರಾಟದಲ್ಲಿ ಮೊದಲು ಕ್ರಾಂತಿಯ ಕಿಚ್ಚು ಹಚ್ಚಿದ್ದೇ ಕರ್ನಾಟಕ.
Brand bengalore : ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರವು 3400 ಕೋಟಿ ರೂ.ಗಳ ಯೋಜನೆ