ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಆಗಮಿಸಿ, ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದೆ ಹೇಳಿಕೊಳ್ಳಲು ಐದು ಜನ ರೈತರನ್ನು ಶಾ ಅವರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡುತ್ತೇನೆ ಎಂದು ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಸಂಘಟನೆಗಳು, ರೈತರು, ಮುಖಂಡರುಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿದರೆ ಎಷ್ಟು ಲಾಭ ಉಂಟು ಗೊತ್ತಾ..?
ನಾವೆಲ್ಲರೂ ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದವರು ರೈತರ ಸಮಸ್ಯೆಗಳನ್ನು ಕುರಿತು ಜನವರಿ 07ರೊಳಗೆ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗುವುದು ಮತ್ತು ರಾಜ್ಯ ಸರ್ಕಾರದಿಂದ ಸಮಸ್ಯೆಗಳನ್ನು ಬಗೆಹರಿಸುವಂತಹ ಪ್ರಯತ್ನವನ್ನು ಮಾಡಲಾಗುವು ಎಂದು ಹೇಳಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡ್ಯ ಜಿಲ್ಲೆಗೆ ಆಗಮಿಸಿ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಈ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಸಚಿವರ ಮುಂದೆ ಹೇಳಿಕೊಳ್ಳಲು ಅವಕಾಶ ಮಾಡಿಕೊಡುತ್ತೇನೆ ಎಂದು ರೈತರಿಗೆ ಗೋಪಾಲಯ್ಯ ಅವರು ಭರವಸೆ ನೀಡಿದರು.
ಇವು ಕಿಡ್ನಿಯಲ್ಲಿ ಕಲ್ಲುಗಳನ್ನು ಉಂಟುಮಾಡುವ ಆಹಾರಗಳು ಇವುಗಳಿಂದ ದೂರವಿರುವುದು ಉತ್ತಮ..!
ಜಿಲ್ಲೆಯಲ್ಲಿ ಹಲವಾರು ದಿನಗಳಿಂದ ವಿವಿಧ ಸಂಘಟನೆಗಳು ಒಗ್ಗೂಡಿ, ರೈತರು ತಮ್ಮ ಬೇಡಿಕೆಯನ್ನು ಪೂರೈಸುವಂತೆ ಮತ್ತು ತಮಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಳ್ಳಬೇಕು ಎಂಬ ದೃಷ್ಟಿಯಿಂದ ಮಾಡುತ್ತಿದ್ದಂತಹ ಪ್ರತಿಭಟನೆಯನ್ನು ಕೈಬಿಡಲಾಗಿದೆ. ಸಭೆಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್, ಜಿಲ್ಲಾಧಿಕಾರಿ ಡಾ.ಹೆಚ್.ಎನ್ ಗೋಪಾಲಕೃಷ್ಣ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಹಾಗೂ ಜಿಲ್ಲೆಯ ವಿವಿಧ ಸಂಘಟನೆಯ ರೈತ ಮುಖಂಡರುಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕ್ಯಾರೆಟ್ ಅನ್ನು ಹಸಿಯಾಗಿ ತಿಂದರೆ ಏನಾಗುತ್ತದೆ ಗೊತ್ತಾ? ಇದು ನಿಮ್ಮ ಆರೋಗ್ಯಕ್ಕೆ ಒಳ್ಳೆಯದೇ? ಅಥವಾ ಕೆಟ್ಟದೋ..!