Sunday, September 8, 2024

Latest Posts

‘ಬಿಜೆಪಿಯಲ್ಲಿ ಶಿಸ್ತು ಹೋಗಿದೆ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ’

- Advertisement -

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವಿಧಾನಸಭಾ ಚುನಾವಣೆಗೂ ಮುನ್ನ ಪ್ರನಾಳಿಕೆಯಲ್ಲಿ ಐದು ಗ್ಯಾರಂಟಿ ಹೇಳಿದ್ದ ಕಾಂಗ್ರೆಸ್ ಮೋಸ ಮಾಡಿದೆ.  ಮೋಸ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಗ್ಯಾರಂಟಿಗಳ ಬಗ್ಗೆ ಈ ವರೆಗೂ ಗೊಂದಲ ಉಂಟಾಗುತ್ತಿದೆ. ಗ್ಯಾರಂಟಿಗಳನ್ನ ಅನುಷ್ಠಾನ ಮಾಡುತ್ತೇವೆ ಅಂತಾ ಹೇಳಿ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವಂತ ಕೆಲಸ ಮಾಡುತ್ತಿದೆ. ಮೊದಲ ಕ್ಯಾಬಿನೇಟ್ ನಲ್ಲೇ ನಿರುದ್ಯೋಗ ಯುವಕರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದೆ. ಕೇಂದ್ರ ಸರ್ಕಾರ ಉಚಿತವಾಗಿ ಅಕ್ಕಿ ಕೊಡುತ್ತಿರುವ ವಿಚಾರದಲ್ಲಿ ಯಾರೊಬ್ಬರೂ ಅಭಿನಂದನೆ ಸಲ್ಲಿಸುತ್ತಿಲ್ಲ. ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿಲ್ಲ ಎಂದು ಗೂಬೆ ಕೂರಿಸುತ್ತಿದ್ದಾರೆ ಎಂದು ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಾರಕಿಹೊಳಿ ನಾಚಿಕೆಗೇಡಿನ‌ ಹೇಳಿಕೆ ನೀಡುತ್ತಾರೆ . ಇವರಿಗೆ ಸ್ವಲ್ಪವಾದರೂ ಜವಾಬ್ದಾರಿ ಇದೆಯಾ ?ಸರ್ಕಾರದ ಗ್ಯಾರಂಟಿ ಭರವಸೆಗಳ ವಿರುದ್ಧ ರಾಜ್ಯದ ಜನ ಆಕ್ರೋಶಗೊಂಡಿದ್ದಾರೆ. ಮಹಿಳೆಯರಿಗೆ ಗೃಹಲಕ್ಷ್ಮೀ ಗೃಹಜ್ಯೋತಿ ಯೋಜನೆಗಳ ಕುರಿತು ಇನ್ನೂ ಸ್ಪಷ್ಟತೆ ಇಲ್ಲ. ಈ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ಹಣ ಯಾವ ರೀತಿ ಹಿಂದಿಸುತ್ತಾರೆ ಎಂದು ಈವರೆಗೂ ಸ್ಪಷ್ಟಪಡಿಸಿಲ್ಲ ಎಂದು ಈಶ್ವರಪ್ಪ ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ಸರ್ಕಾರದ ಈ ನ್ಯೂನತೆಗಳ ವಿರುದ್ಧ ಬಿಜೆಪಿ ಹೋರಾಟ ಹಮ್ಮಿಕೊಳ್ಳಲಿದೆ. ವಿಧಾನಸಭೆ ಅಧಿವೇಶನದಲ್ಲಿ ನಾವು ಹೋರಾಟ ನಡೆಸಲಿದ್ದೇವೆ. ವಿದ್ಯುತ್ ದರ ಏರಿಕೆ ವಿಚಾರದಲ್ಲಿ ಸರ್ಕಾರ ಸ್ಪಷ್ಟಪಡಿಸಬೇಕು. ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಸೇರಿದಂತೆ ನಾವು ಜಾರಿ ಮಾಡಿದ ಕಾಯ್ದೆಗಳನ್ನ ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ಹೊರಟಿದೆ ಎಂದು ಈಶ್ವರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು. ಅಕ್ಕಿ ವಿಚಾರದಲ್ಲಿ ಸಿದ್ಧರಾಮಯ್ಯ, ಡಿ.ಕೆ.ಶಿ ಸುಳ್ಳು ಹೇಳುತ್ತಿದ್ದಾರೆ. ಬಡ ಜನರಿಗೆ ಟೋಪಿ ಹಾಕಿ ಸರ್ಕಾರ ನಡೆಸುತ್ತಿದ್ದಾರೆ. ಗ್ಯಾರಂಟಿಗಳನ್ನ ಸಮರ್ಪಕ ಜಾರಿ ಮಾಡುವಂತೆ ನಾವು ಹೋರಾಟ ಆರಂಭಿಸಲಿದ್ದೇವೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಬಿಜೆಪಿ ಪಕ್ಷದಲ್ಲಿ ಅಲ್ಲಲ್ಲಿ ಸ್ವಲ್ಪ ಶಿಸ್ತು ಕಳೆದು ಹೋಗಿದೆ. ಕಾಂಗ್ರೆಸ್‌ನ‌ ಗಾಳಿ ಸೋಕಿರುವುದರಿಂದ ನಮ್ಮಲ್ಲಿ ಶಿಸ್ತು ಕಳೆದು ಹೋಗಿದೆ. ಬಹಿರಂಗವಾಗಿ ಅಡ್ಜಸ್ಟಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗ್ತಿರೋದು ದುರ್ದೈವ. ಬಹಿರಂಗವಾಗಿ ಹೀಗೆ ಮಾತಾಡಬಾರದು. ಇದು ನಾಲ್ಕು ಗೋಡೆ ಮದ್ಯೆ ಮಾತನಾಡಬೇಕು. ನಾನು ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ. ನಿನ್ನೆ ಪ್ರಕರಣ ಇರಬಹುದು ಯಾವುದೇ ಪ್ರಕರಣ ಇರಬಹುದು. ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ನಡೆದಿಲ್ಲ. ಬಹಿರಂಗ ಹೇಳಿಕೆ ಕೊಡೋ ಬಗ್ಗೆ ಪಕ್ಷದ ನಾಯಕರ ಜೊತೆ ನಾನು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ಶಿಸ್ತು ಹೋಗಿದೆ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಅನುಭವಿಸ್ತೀದಿವಿ ಎನ್ನುವ ಮೂಲಕ ಪರೋಕ್ಷವಾಗಿ ಆಪರೇಶನ್ ಕಮಲದ ವಿರುದ್ದ ಈಶ್ವರಪ್ಪ ಗರಂ ಆಗಿದ್ದಾರೆ. ಆಪರೇಶನ್ ಕಮಲವೇ ಬಿಜೆಪಿ ಸೋಲಿಗೆ ಮುಳುವಾಯ್ತು. ಕಾಂಗ್ರೆಸ್ ನಾಯಕರು ಬಂದ ಮೇಲೆ ಬಿಜೆಪಿಯಲ್ಲಿ ಅಲ್ಪ ಸ್ವಲ್ಪ ಶಿಸ್ತು ಹೋಗಿದೆ. ಮುಂದೆ ನಮ್ಮ ನಾಯಕರು ಬಾಲ ಕಟ್ ಮಾಡ್ತಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಪರೋಕ್ಷವಾಗಿ ಸಭಾಪತಿ ಸ್ಥಾನಕ್ಕೆ ಒಮ್ಮತ ವ್ಯಕ್ತಪಡಿಸಿದ ಜಗದೀಶ್ ಶೆಟ್ಟರ್

‘ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ’

ಬಿಜೆಪಿಯ ಅಡಿಪಾಯವೇ ಡಿಸ್ಟರ್ಬ್ ಆಗಿ ಕುಸಿದು ಹೋಗುತ್ತಿದೆ: ಜಗದೀಶ್ ಶೆಟ್ಟರ್

- Advertisement -

Latest Posts

Don't Miss