ಕಲಬುರಗಿ: ನಗರದ ಶರಣನಗರದಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕರಾಗಿರುವ ಡಾ. ಅಜಯ್ ಸಿಂಗ್ ಅವರ ಮನೆಯ ಆವರಣದಲ್ಲಿ ಮರಕ್ಕೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯ ಹೆಸರು ದೇವೇಂದ್ರ (32)ಇನ್ನು ಈ ವ್ಯಕ್ತಿ ಕಳೆದ ನಾಲ್ಕೈದು ವರ್ಷಗಳಿಂದ ಡಾ ಅಜಯ್ ಸಿಂಗ್ ಅವರು ಮನೆಯಲ್ಲಿ ವಾಚ್ ಮೆನ್ ಆಗಿ ಕೆಲಸ ಮಾಡಿಕೊಂಡಿದ್ದನು. ಬುಧುವಾರ ರಾತ್ರಿ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು ಡಾ ಅಜಯ್ ಸಿಂಗ್ ಅವರ ಮನೆಯಲ್ಲಿ ಅಡುಗೆ ಮಾಡುವ ವ್ಯಕ್ತಿ ಗುರುವಾರ ಬೆಳಿಗ್ಗೆ ಮರದಲ್ಲಿ ನೇತಾಡುತ್ತಿರುವ ಶವ ಕಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾನೆ.
ಸ್ಥಳಕ್ಕೆ ಬ್ರಹ್ಮಪುರ ಪೋಲಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ . ಡಾ ಅಜಯ್ ಸಿಂಗ್ ಅವರು ಸದ್ಯ ಬೆಂಗಳೂರಿನಲ್ಲಿದ್ದಾರೆ.