ಪರಿಸರ ಸಂರಕ್ಷಣೆಯ ನಿಯಮ ಉಲ್ಲಂಘನೆ ಆರೋಪ: ಕಲ್ಯಾಣಿ ಸ್ಟೀಲ್ಸ್‌ ಲಿಮಿಟೆಡ್‌ ಕಾರ್ಖಾನೆ ಮುಚ್ಚಲು ಆದೇಶ

Koppala News: ಪರಿಸರ ಸಂರಕ್ಷಣೆಯ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಗಿಣಿಗೇರಿ ಹೊಸಪೇಟೆ ರಸ್ತೆಯಲ್ಲಿರುವ ಕಲ್ಯಾಣಿ ಸ್ಟೀಲ್ಸ್‌ ಲಿಮಿಟೆಡ್‌ ಕಾರ್ಖಾನೆಯನ್ನು ತಕ್ಷಣದಿಂದ ಮುಚ್ಚಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ – CPCB ಆದೇಶಿಸಿದೆ.

ಪರಿಸರ ಮಾಲಿನ್ಯ ತಡೆ ಹಾಗೂ ನಿಯಮ ಪಾಲನೆಯಲ್ಲಿ ಲೋಪ ಕಂಡುಬಂದ ಕಾರಣಕ್ಕೆ ಮಂಡಳಿ ಈ ಕಠಿಣ ಕ್ರಮ ಕೈಗೊಂಡಿದೆ. ಈ ಆದೇಶದ ಹಿನ್ನೆಲೆಯಲ್ಲಿ ಕಾರ್ಖಾನೆಯ ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಸ್ಥಳೀಯ ಆಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ CPCB ಸೂಚನೆ ನೀಡಿದೆ.

ಕಾರ್ಖಾನೆಯಿಂದ ಹೊರಬರುವ ಹೊಗೆ, ತ್ಯಾಜ್ಯ ನೀರು ಮತ್ತು ಇತರೆ ಮಾಲಿನ್ಯದಿಂದ ಸುತ್ತಮುತ್ತಲಿನ ಗ್ರಾಮಗಳ ಜನರು ಹಾಗೂ ಕೃಷಿ ಭೂಮಿಗೆ ತೊಂದರೆಯಾಗುತ್ತಿದೆ ಎಂಬ ಸ್ಥಳೀಯರ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸಿಪಿಸಿಬಿ ನಿಯಮಗಳನ್ನು ಪಾಲಿಸಿ ಮರು ಪರಿಶೀಲನೆಗೆ ಒಳಪಟ್ಟ ನಂತರವೇ ಕಾರ್ಖಾನೆಯನ್ನು ಮತ್ತೆ ಆರಂಭಿಸಲು ಅವಕಾಶ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

About The Author