Thursday, December 5, 2024

Latest Posts

ಕನ್ನಡ ಸಾಹಿತ್ಯ ಹಾಗೂ ಕರ್ನಾಟಕ ಸಂಗೀತಕ್ಕೆ ಕನಕದಾಸರ ಕೊಡುಗೆ ಅಪಾರ: ಎನ್.ಚಲುವರಾಯಸ್ವಾಮಿ

- Advertisement -

Political News: ಕನಕದಾಸರು ಮೋಹನತರಂಗಿಣಿ, ನಳ ಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಸಾರ ಕೃತಿಗಳನ್ನು ಕನಕದಾಸರು ರಚಿಸಿದ್ದು, ಕನ್ನಡ ಸಾಹಿತ್ಯ ಹಾಗೂ ಕರ್ನಾಟಕ ಸಂಗೀತಕ್ಕೆ ಅವರ ಕೊಡುಗೆ ಅಪಾರ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಮಂಡ್ಯ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 537 ನೇ ಕನಕ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ಪ್ರತಿ ವರ್ಷವೂ ಕೂಡ ನಾವು ಕನಕದಾಸ ಜಯಂತಿಯನ್ನು ಆಚರಿಸುತ್ತಿದ್ದೇವೆ. ಹರಿಭಕ್ತರಾದ ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಡ ಗ್ರಾಮದಲ್ಲಿ 1509 ನೇ ಇಸವಿಯಲ್ಲಿ ಜನಿಸಿದ್ದು, ಇಂದು ಕನಕದಾಸರ 537ನೇ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸುತ್ತಿದ್ದೇವೆ. ಎಲ್ಲರಿಗೂ ಕನಕದಾಸ ಜಯಂತಿಯ ಶುಭಾಶಯಗಳು ಎಂದು ತಿಳಿಸಿದರು.

ಶ್ರೀಕೃಷ್ಣ ಪರಮಾತ್ಮ ದೇವರೇ ಕನಕದಾಸರ ಭಕ್ತಿಗೆ ಮೆಚ್ಚಿ ಅವರಿಗೆ ವಿಶೇಷ ದರ್ಶನ ನೀಡಿದ ಘಟನೆಯಿಂದ ಕನಕದಾಸರ ಅಪಾರ ಭಕ್ತಿಯನ್ನು ತಿಳಿಯಬಹುದಾಗಿದೆ ಎಂದರು.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ನಂತರ ಹಾವೇರಿ ಜಿಲ್ಲೆಯಲ್ಲಿ ಕನಕಪೀಠವನ್ನು ಸ್ಥಾಪನೆ ಮಾಡಿದರು. ಶ್ರೀರಂಗಪಟ್ಟಣದ ಮಹದೇವಪುರದ ಬಳಿ ಕಾವೇರಿ ನದಿಯ ಮಧ್ಯದಲ್ಲಿ ದಾಸ ಶ್ರೇಷ್ಠರಾದ ಕನಕದಾಸರು ಕುಳಿತು ಧ್ಯಾನ ಮಾಡಿರುವ ಕನಕ ಬಂಡೆಯನ್ನು ಅಭಿವೃದ್ಧಿಪಡಿಸಲು ಹಲವರು ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಕನಕದಾಸರ ಇತಿಹಾಸವನ್ನು ಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ವರದಿ ರಚಿಸಿ ನಂತರ ಮುಖ್ಯಮಂತ್ರಿಯವರ ಗಮನಕ್ಕೆ ತಂದು ಅಭಿವೃದ್ಧಿಗಾಗಿ ಪ್ರಯತ್ನಿಸಲಾಗುವುದು ಎಂದರು.

“ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ ಕುಲದ ನೆಲೆಯನೆನಾದರೂ ಬಲ್ಲಿರಾ” ಎಂಬ ಕನಕದಾಸರ ಕೀರ್ತನೆಯನ್ನು ಇಂದಿಗೂ ಸಹ ಅನೇಕ ಸಮಾರಂಭಗಳಲ್ಲಿ ಗೀತೆಯ ಮೂಲಕ ವ್ಯಕ್ತ ಪಡಿಸಲಾಗುತ್ತಿದೆ ಎಂದರು.

ನಮ್ಮ ದೇಶದಲ್ಲಿ ಕನಕದಾಸರಾಂತಹ ಮಹಾನ್ ಶ್ರೇಷ್ಠ ವ್ಯಕ್ತಿಗಳು ಹಾಗೂ ದಾರ್ಶನಿಕರು ಜನಿಸಿದ್ದು, ಈ ಭೂಮಿಯ ಮೇಲೆ ನಡೆದಾಡಿ ಅನೇಕ ಕೊಡುಗೆಯನ್ನು ನೀಡಿದ್ದಾರೆ. ಅವರುಗಳ ಸಾಧನೆಯನ್ನು ಪ್ರತಿಯೊಬ್ಬರೂ ನೆನೆದು ಪೂಜಿಸಬೇಕು.

ಇದೆ ಡಿಸೆಂಬರ್ 20, 21 ಹಾಗೂ 23 ರಂದು 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಜೆಲೆಯಲ್ಲಿ ನಡೆಯಲಿದೆ. ಪ್ರತಿಯೊಬ್ಬರೂ ತಪ್ಪದೇ ಸಮ್ಮೇಳನದಲ್ಲಿ ಭಾಗವಹಿಸಿ ಎಂದು ತಿಳಿಸಿದರು.

ವಿಧಾನಸಭಾ ಶಾಸಕ ಪಿ ರವಿಕುಮಾರ್ ಅವರು ಮಾತನಾಡಿ ಕನಕದಾಸರ ಜಯಂತಿಯು ಒಂದು ಅರ್ಥ ಪೂರ್ಣವಾದ ಕಾರ್ಯಕ್ರಮವಾಗಿದೆ. ಕನಕದಾಸರು ಸುಮಾರು 15-16ನೇ ಶತಮಾನದಲ್ಲಿ ಜಾತಿ ಪದ್ಧತಿಯನ್ನು ಹೋಗಲಾಡಿಸಲು ಹೋರಾಟ ಮಾಡಿ ಎಲ್ಲಾ ಕುಲದವರು ಒಂದೇ ಎಂದು ಸಾರಿದ ದಾರ್ಶನಿಕರು. ಅಂದಿನ ಸಮಾಜದಲ್ಲಿ ಒಗ್ಗಟ್ಟನ್ನು ತರುವ ಸಲುವಾಗಿ ಶ್ರಮಿಸಿದ ಮಹಾನ್ ಹೋರಾಟಗಾರರಾಗಿದ್ದಾರೆ ಎಂದರು.

ಕನಕದಾಸರು ಯಾವುದೇ ಗುರುಕುಲದಲ್ಲಿ ವಿದ್ಯಾಭ್ಯಾಸ ಮಾಡದೆ ಅನೇಕ ಕಾವ್ಯಗಳನ್ನು ರಚನೆ ಮಾಡಿದ್ದಾರೆ. ಇವರ ಭಕ್ತಿಗೆ ಮೆಚ್ಚಿ ಶ್ರೀಕೃಷ್ಣ ದೇವರು ಪೂರ್ವಾಭಿಮುಖದಿಂದ ಪಶ್ಚಿಮಾಭಿಮುಖವಾಗಿ ತಿರುಗಿ ದರ್ಶನ ನೀಡಿದ್ದರಿಂದ ಅವರಿಗೆ ಅಂದಿನಿಂದ ಭಕ್ತ ಕನಕದಾಸ ಎಂದು ಪ್ರಸಿದ್ಧರಾಗಿದ್ದಾರೆ. ಅವರನ್ನು ಎಲ್ಲರೂ ಸ್ಮರಿಸಿಸೋಣ ಎಂದು ತಿಳಿಸಿದರು.

ಕನಕದಾಸ ಭಾವಚಿತ್ರದ ಮೆರವಣಿಗೆಗೆ ಚಾಲನೆ

537 ನೇ ಕನಕ ಜಯಂತಿಯ ಅಂಗವಾಗಿ ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಅವರಣದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ ಅವರು ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಮೈಸೂರು – ಬೆಂಗಳೂರು ರಸ್ತೆಯ ಮುಖೇನ ಆರ್ ಪಿ ರಸ್ತೆಯ ಮೂಲಕ ಅಂಬೇಡ್ಕರ್ ಭವನದಲ್ಲಿ ಸಮಾವೇಶಗೊಂಡಿತು.

ಇದೇ ಸಂದರ್ಭದಲ್ಲಿ ಮಂಡ್ಯ ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ ಬಿ ವಿ ನಂದೀಶ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ತಿಮ್ಮಯ್ಯ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ ಎಲ್ ಸುರೇಶ್, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಉಪಾಧ್ಯಕ್ಷರು ಬಿ ಕೆ ರಾಜೇಶ್ ಸೇರಿದಂತೆ ಮುಖಂಡರುಗಳಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಮಂಡ್ಯ ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್ (ನಾಗೇಶ್), ಮೈಸೂರು ಸಕ್ಕರೆ ಕಂಪನಿ ನಿಯಮಿತದ ಅಧ್ಯಕ್ಷ ಸಿಡಿ ಗಂಗಾಧರ್, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯೀಮ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ತಿಮ್ಮಯ್ಯ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಂ ಎಲ್ ಸುರೇಶ್, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಉಪಾಧ್ಯಕ್ಷರು ಬಿ ಕೆ ರಾಜೇಶ್, ಉಪ ವಿಭಾಗಾಧಿಕಾರಿ ಶಿವಮೂರ್ತಿ, ನಗರಸಭೆ ಸದಸ್ಯ ಶ್ರೀಧರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ ಬಿ ವಿ ನಂದೀಶ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಡಾ ಸಿದ್ದಲಿಂಗೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

- Advertisement -

Latest Posts

Don't Miss