Saturday, July 12, 2025

Latest Posts

ಕಾಂಗ್ರೆಸ್ ಸೇರ್ಪಡೆಗೊಂಡ ಕನ್ಹಯ್ಯ ಕುಮಾರ್, ಜಿಗ್ನೇಶ್ ಮೆವಾನಿ..!

- Advertisement -

www.karnatakatv.net : ಸಿಪಿಐ ನಾಯಕ ಹಾಗೂ ಜೆಎನ್ ಯು ವಿದ್ಯಾರ್ಥಿ ಒಕ್ಕೂಟದ ಮಾಜಿ ನಾಯಕ ಕನ್ಹಯ್ಯ ಕುಮಾರ್ ಮತ್ತು ಗುಜರಾತ್ ಶಾಸಕ ಜಿಗ್ನೇಶ್ ಮೆವಾನಿ ಇಂದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಜಿಗ್ನೇಶ್ ಮೇವಾನಿ ಮತ್ತು ಕನ್ಹಯ್ಯ ಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಪ್ರಾಬಲ್ಯ ಹೊಂದಿರೋ ಗುಜರಾತ್ ನಲ್ಲಿ ಮುಂದಿನ ವರ್ಷ ಎದುರಾಗಲಿರೋ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ  ಉಭಯ ಪ್ರಭಾವಿ ನಾಯಕರು ಸದ್ಯ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎನ್ನಲಾಗಿದೆ.

ಬಿಜೆಪಿ ವಿರುದ್ಧ ಜಯ ಸಾಧಿಸಲು ಇನ್ನಿಲ್ಲದ ಕಸರತ್ತು ನಡೆಸ್ತಿರೋ ಕಾಂಗ್ರೆಸ್ ಸದ್ಯ ಇಬ್ಬರು ಪ್ರಭಾವಿ ಅಭ್ಯರ್ಥಿಗಳನ್ನ ತನ್ನತ್ತ ಸೆಳೆಯಲು ಯಶಸ್ವಿಯಾಗಿದೆ.  ಇನ್ನು 2019ರಲ್ಲಿ ಸಿಪಿಐ ಮೂಲಕ ರಾಜಕೀಯ ಪ್ರವೇಶಿಸಿ ಬಿಹಾರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಕನ್ಹಯ್ಯ ಕುಮಾರ್ ಬಿಜೆಪಿ ಅಭ್ಯರ್ಥಿ ಗಿರಿರಾಜ್ ಸಿಂಗ್ ವಿರುದ್ಧ ಸೋತಿದ್ರು.

ರಾಷ್ಟ್ರೀಯ ದಲಿತ ಅಧಿಕಾರ್ ಮಂಚ್ ನ ಸಂಚಾಲಕರಾಗಿದ್ದ ಜಿಗ್ನೇಶ್ ಮೆವಾನಿ 2017ರಲ್ಲಿ ಗುಜರಾತ್ ನ ವಡ್ಗಾಂ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆ ಸ್ ಬೆಂಬಲದೊಂದಿಗೆ ಗೆದ್ದಿದ್ರು.

- Advertisement -

Latest Posts

Don't Miss