ಸಾಯಿಧರಮ್ ತೇಜ್ ಅಭಿನಯದ ‘ವಿರೂಪಾಕ್ಷ’ ಚಿತ್ರದ ಟೈಟಲ್ ಗ್ಲಿಂಪ್ಸ್ ಬಿಡುಗಡೆ

‘ಸುಪ್ರೀಂ ಹೀರೋ’ ಸಾಯಿಧರಮ್ ತೇಜ್ ಅಭಿನಯದ ಪ್ಯಾನ್-ಇಂಡಿಯಾ ಮಿಸ್ಟಿಕ್ ಥ್ರಿಲ್ಲರ್ ಚಿತ್ರಕ್ಕೆ ‘ವಿರೂಪಾಕ್ಷ’ ಎಂಬ ಹೆಸರಿಡಲಾಗಿದ್ದು, ಟೈಟಲ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. ‘ವಿರೂಪಾಕ್ಷ’ ಚಿತ್ರವನ್ನು ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿ ಚಿತ್ರ ಎಲ್‌ಎಲ್‌ಪಿ ನಿರ್ಮಿಸುತ್ತಿದೆ. ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಬಿ.ವಿ.ಎಸ್.ಎನ್. ಪ್ರಸಾದ್ ನಿರ್ಮಿಸಿದರೆ, ಬಾಪಿನೀಡು ಪ್ರಸ್ತುತಪಡಿಸಿದ್ದಾರೆ.

ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ ದತ್ತಾ

ಇದು 1990ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು, ಕಾಡಿಗೆ ಅಂಟಿಕೊಂಡಿರುವ ಹಳ್ಳಿಯೊಂದರಲ್ಲಿ ಮೂಢನಂಬಿಕೆಗಳ ಹೆಸರಿನಲ್ಲಿ ನಡೆಯುವ ಕೆಲವು ವಿಲಕ್ಷಣ ಘಟನೆಗಳನ್ನು ನಾಯಕ ಹೇಗೆ ನಿಭಾಯಿಸುತ್ತಾನೆ ಎಂಬುದನ್ನು ಚಿತ್ರದಲ್ಲಿ ತೋರಿಸಲಾಗಿದೆ.

ನಾಳೆ ನಡೆಯುವ ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಬಿಎಸ್ ವೈಗೆ ಅಧಿಕೃತ ಆಹ್ವಾನವಿಲ್ಲ

ಕಳೆದ ವರ್ಷ ಹೈದರಾಬಾದ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಿಂದ ಚೇತರಿಸಿಕೊಂಡಿರುವ ಸಾಯಿಧರಮ್​ ತೇಜ್ ಈ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಕಾರ್ತಿಕ್​ ದಂಡು ನಿರ್ದೇಶಿಸಿದ್ದು, ಶ್ಯಾಮ್​ ದತ್​ ಅವರ ಛಾಯಾಗ್ರಹಣ ಮತ್ತು ಕನ್ನಡದ ಅಜನೀಶ್​ ಲೋಕನಾಥ್​ ಸಂಗೀತವಿದೆ. ‘ವಿರೂಪಾಕ್ಷ’ ಚಿತ್ರವು ಏಪ್ರಿಲ್ 21, 2023ರಂದು ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಪ್ಯಾನ್​ ಇಂಡಿಯಾ ಚಿತ್ರವಾಗಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ರಾಜಧಾನಿಯಲ್ಲಿ ‘ಬ್ಲೂ ಫೀವರ್’ ಹಾವಳಿ : ಚಿಕ್ಕಮಕ್ಕಳಲ್ಲಿ ಜ್ವರ, ಶೀತ ಕಾಣಿಸಿದರೆ ನಿರ್ಲಕ್ಷ್ಯ ಬೇಡ

ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ : ಮಾಜಿ ಶಾಸಕ ವೈ.ಎಸ್.ವಿ ದತ್ತಾ

About The Author