ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20, 21, 22ರಂದು ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಸಾಹಿತ್ಯ ಸಮ್ಮೇಳನ ದಿನಾಂಕವನ್ನು ಪ್ರಕಟಿಸಿದರು.
ಈ ಹಿಂದೆ ಜೂನ್ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಆದರೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು ಆಯ್ಕೆಯಾದ ತಕ್ಷಣವೇ ಮಾಹಿತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
1974ರಲ್ಲಿ ಮಂಡ್ಯದಲ್ಲಿ 48ನೇ ಸಾಹಿತ್ಯ ಸಮ್ಮೇಳನ ನಡೆದಿತ್ತು. ಅದಕ್ಕೆ ಜಯದೇವಿ ತಾಯಿ ಲಿಗಾಡೆ ಅವರು ಅಧ್ಯಕ್ಷತೆ ವಹಿಸಿದ್ರು. 1994ರಲ್ಲಿ ನಡೆದ 63ನೇ ಸಾಹಿತ್ಯ ಸಮ್ಮೇಳನ ಡಾ.ಚದುರಂಗ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.