Saturday, July 27, 2024

Latest Posts

ನುಡಿ ಜಾತ್ರೆಗೆ ಮಾಜಿ ಸಿಎಂ ಸಿದ್ದರಾಮಯ್ಯಗೆ ಆಹ್ವಾನ

- Advertisement -

ಬೆಂಗಳೂರು: ಹಾವೇರಿಯಲ್ಲಿ ಹಮ್ಮಿಕೊಂಡ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಆಹ್ವಾನ ನೀಡಿದರು.

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ

ಸಮಸ್ತ ಕನ್ನಡಿಗರ ಹೆಮ್ಮೆಯ ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜನವರಿ ೦6, ೦7 ಹಾಗೂ ೦8 ರಂದು ಆಯೋಜಿಸಿದ್ದು ಸಮ್ಮೇಳನದ ಸಮಾರೋಪ ಸಮಾರಂಭಕ್ಕೆ ಮುಖ್ಯ ಅಥಿತಿಗಳಾಗಿ ಭಾಗವಹಿಸುವಂತೆ ನಾಡೋಜ ಡಾ. ಮಹೇಶ ಜೋಶಿ ಮನವಿ ಮಾಡಿಕೊಂಡರು. ಕನ್ನಡ ಸಾಹಿತ್ಯ ಪರಿಷತ್ತಿನ ಆತ್ಮೀಯ ಆಮಂತ್ರವನ್ನು ಸ್ವೀಕರಿಸಿದ ಸಿದ್ದರಾಮಯ್ಯ ಅವರು ಹೆಮ್ಮೆಯಿಂದ ಕನ್ನಡದ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದರು.

ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್

ಆಮಂತ್ರಣ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ ಅವರು ಕಳೆದ ಎರಡು ವರ್ಷಗಳಿಂದ ಭಾರಿ ನಿರೀಕ್ಷೆಯಲ್ಲಿದ್ದ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈಗ ಮುಹೂರ್ತ ಫಿಕ್ಸ್ ಆಗಿದೆ. ಹಾವೇರಿಯಲ್ಲಿ ನಡೆಯಲಿರುವ ಸಮ್ಮೇಳನವು  ಕನ್ನಡಿಗರ ಪಾಲಿನ ಹೆಮ್ಮೆಯ ಕಾರ್ಯಕ್ರಮವಾಗಬೇಕಿದೆ. ಆ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿರುವ ಕಾರ್ಯ ಸ್ವಾಗತಾರ್ಹ. ಮುಂದಿನ ಅಧಿವೇಶನದಲ್ಲಿ ಸಮಗ್ರ ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕ-2022ನ್ನು ಕಾನೂನು ಮಾಡಲು ಸರಕಾರ ಮುಂದಾಗಿದೆ. ಈ ವಿಧೇಯಕವನ್ನು ಕಾನೂನು ಮಾಡುವಲ್ಲಿ ಸರಕಾರದ ಜೊತೆ ಸಮರ್ಪಕ ಚರ್ಚೆ ನಡೆಸಿ ಕಾನೂನು ಮಾಡುವುದಕ್ಕೆ ಕೈಜೋಡಿಸಲಿದೆ .ಇತ್ತೀಚಿನ ದಿನಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ವಿಧೇಯಕದಲ್ಲಿ ಇರಬೇಕಾದ ಅಂಶಗಳ ಬಗ್ಗೆ ಸಮಗ್ರ ಚರ್ಚೆ ನಡೆಸಿರುವುದನ್ನು ಸಹ ಗಮನಿಸಿದ್ದೇನೆ. ಎಲ್ಲವನ್ನೂ ಸದನದಲ್ಲಿ ಪ್ರಸ್ತಾಪಿಸಿ ಕಾನೂನು ಮಾಡುವುದಕ್ಕೆ ಕೈಜೋಡಿಸುವ ಭರವಸೆಯನ್ನು ನೀಡಿದರು.

ಮಂಡ್ಯದಲ್ಲಿ ನಾಳೆ ಜನ ಸಂಕಲ್ಪ ಯಾತ್ರೆ

ಕನ್ನಡಿಗರ ಹೆಮ್ಮೆಯ ನುಡಿ ಜಾತ್ರೆಯನ್ನು ಅರ್ಥ ಗರ್ಭಿತವಾಗಿ ನಡೆಸುವ ಹಿನ್ನೆಲೆಯಲ್ಲಿ ಸಿದ್ದತೆಗಳು ನಡೆಯುತ್ತಿವೆ. ಕನ್ನಡ ರಥ ನಾಡಿನಾದ್ಯಂತ ಸಂಚರಿಸುತ್ತದೆ. ವಿದೇಶದಲ್ಲಿ ಇರುವ ಕನ್ನಡಿಗರು 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ವಿದೇಶದಲ್ಲಿ ನೆಲೆ ನಿಂತ ಕನ್ನಡಿಗರಿಗೆ ಈ ಬಾರಿಯ ಸಮ್ಮೇಳನದಲ್ಲಿ ವಿಶೇಷ ಗೌರವ ನೀಡಲಿದ್ದೇವೆ. ಜೊತೆಗೆ ಈ ಬಾರಿಯ ಸಮ್ಮೇಳನದ ಪುಸ್ತಕ ಮಳಿಗೆಗಳಲ್ಲಿ ಕೇವಲ ಕನ್ನಡ ಪುಸ್ತಕಗಳನ್ನೇ ಪ್ರದರ್ಶನ ಮತ್ತು ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ತಲೈವ ರಜನಿಕಾಂತ್ ತಿರುಪತಿ ತಿಮ್ಮಪ್ಪನ ದರ್ಶನ

ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್

- Advertisement -

Latest Posts

Don't Miss