ಮೈಸೂರಲ್ಲಿ ಸ್ಟಿಂಗ್ ಆಪರೇಷನ್ ಮಾಡಿರುವುದಾಗಿ ಬೆದರಿಸಿ ಹಣ ವಸೂಲಿಗೆ ಸರ್ಕಾರಿ ವೈದ್ಯಾಧಿಕಾರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಪ್ರಕರಣ ತಿಲಕ್ ನಗರದಲ್ಲಿ ನಡೆದಿದ್ದು, ಈ ಸಂಬಂಧ RTI ನ್ಯೂಸ್ ಪೇಪರ್ ಮುಖ್ಯಸ್ಥ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ತಿಲಕ್ ನಗರದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಕಚೇರಿಯ ಅಕೌಂಟ್ಸ್ ಆಫೀಸರ್‌ಗೆ ಸ್ಟಿಂಗ್ ಆಪರೇಷನ್ ಮಾಡಿರುವುದಾಗಿ ಬೆದರಿಸಿ 25 ಲಕ್ಷ ರೂಪಾಯಿ ವಸೂಲಿಗೆ ಆರೋಪಿಗಳು ಯತ್ನಿಸಿದ್ದಾರೆ. ಈ ಸಂಬಂಧ ವೈದ್ಯಾಧಿಕಾರಿಗಳು RTI ನ್ಯೂಸ್ ಪೇಪರ್‌ನ ಮುಖ್ಯಸ್ಥ ಹರೀಶ್ ಅಲಿಯಾಸ್ ರಾಮು ಹಾಗೂ ಪ್ರತಾಪ್ ಎಂಬುವರ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತ ಆರೋಪಿಗಳು ಕನ್ನಡಾಂಬೆ ರಕ್ಷಣಾ ವೇದಿಕೆಯ ಮುಖ್ಯಸ್ಥರೆಂದು ಗುರುತಿಸಲಾಗಿದೆ.
ಆರೋಪಿಗಳು ಸರ್ಕಾರಿ ವೈದ್ಯಾಧಿಕಾರಿಯನ್ನು ಗುರಿಯಾಗಿಸಿ, ಸ್ಟಿಂಗ್ ಆಪರೇಷನ್‌ನಲ್ಲಿ ಸಿಕ್ಕಿಬಿದ್ದಿರುವುದಾಗಿ ಬೆದರಿಸಿ 25 ಲಕ್ಷ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದರು. ಹಣ ನೀಡದಿದ್ದರೆ ಆರೋಗ್ಯ ಸಚಿವರು ಮತ್ತು ಲೋಕಾಯುಕ್ತರಿಗೆ ದೂರು ಸಲ್ಲಿಸಿ, ಮಾನಹಾನಿಗೊಳಗಾಗುವಂತೆ ಮಾಡಿ, ಅಂತಿಮವಾಗಿ ಸಸ್ಪೆಂಡ್ ಮಾಡಿಸುವುದಾಗಿ ಧಮ್ಕಿ ಹಾಕಿದ್ದರು.
ಈ ಬೆದರಿಕೆಯಿಂದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಕಚೇರಿಯ ಅಕೌಂಟ್ಸ್ ಆಫೀಸರ್ ಡಾ.ಕಾಂತರಾಜು, ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರಿಂದ. ಪೊಲೀಸರು ತನಿಖೆ ಆರಂಭಿಸಿ ಆರೋಪಿಗಳಲ್ಲಿ ಪ್ರತಾಪ್‌ನನ್ನು ಬಂಧಿಸಲಾಗಿದೆ. ಆದರೆ, ಹರೀಶ್ ತಲೆಮರೆಸಿಕೊಂಡಿದ್ದಾನೆ.
ಈ ಹಿಂದೆಯೂ ಹುಣಸೂರಿನಲ್ಲಿ ಹರೀಶ್ ವಿರುದ್ಧ ಬ್ಲಾಕ್‌ಮೇಲ್ ಆರೋಪದಡಿ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ. ಆರೋಪಿಗಳು ತಮ್ಮ ಸಂಘಟನೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು, ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿ ಹಣ ವಸೂಲಿಗೆ ಯತ್ನಿಸುತ್ತಿದ್ದರು ಎಂದು ತಿಳಿದುಬಂದಿದೆ. ಸದ್ಯ ವಿಜಯನಗರ ಪೊಲೀಸರು ತಲೆಮರೆಸಿಕೊಂಡಿರುವ ಹರೀಶ್‌ನನ್ನು ಪತ್ತೆಹಚ್ಚಲು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ