Saturday, July 27, 2024

Latest Posts

ಕನ್ನಡಿಗ ಸುನಿಲ್ ಕುಮಾರ್ ಗೆ ಅಂತಾರಾಷ್ಟ್ರೀಯ ಪ್ರಶಸ್ತಿ

- Advertisement -

ಕರ್ನಾಟಕ ಟಿವಿ : ಉದಯೋನ್ಮುಖ ಶಿಕ್ಷಣ ಕ್ಷೇತ್ರದ ನೇತಾರ ಸುನಿಲ್ ಕುಮಾರ್ ಅವರು ಶಿಕ್ಷಣ ಕ್ಷೇತ್ರ ಹಾಗೂ ಸಮಾಜಿಕ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ದುಬೈನ ಅಮಿಟಿ ವಿಶ್ವವಿದ್ಯಾಲಯದಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಶಿಕ್ಷಣ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿಶೇಷ ಸಲಹೆಗಾರ ಡಾ.ದೀಪಕ್ ವೊಹ್ರಾ ಹಾಗೂ ಅಫ್ಘನಿಸ್ತಾದ ಶಿಕ್ಷಣ ಸಚಿವರ ಹಿರಿಯ ಸಲಹೆಗಾರ ಡಾ.ಅತ್ತಾವುಲ್ಲಾ ವಹಿದ್ಯಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಕೋಲ್ಕತ್ತಾದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ)ನಲ್ಲಿ ಎಂಬಿಎ ಪದವಿ ಪಡೆದಿರುವ ಸುನಿಲ್ ಕುಮಾರ್, ದೇಶಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಹಾಗು ಗ್ರಾಮೀಣ ವಿದ್ಯಾರ್ಥಿಗಳಿಗೆ ಕೈಗೆಟುಕುವ ದರದಲ್ಲಿ ಶಿಕ್ಷಣವನ್ನು ನೀಡುವಲ್ಲಿ ಮಹತ್ವದ ಪಾತ್ರವಹಿಸಿರುವುದು ಹೆಮ್ಮೆಯ ಸಂಗತಿಯಾಗಿದೆ.ಬಹುತೇಕ ರಾಷ್ಟ್ರಗಳಲ್ಲಿ ಅಲ್ಲಿನ ಸರಕಾರಿ ಶಾಲೆಗಳೇ ಶಿಕ್ಷಣಕ್ಕೆ ಪ್ರಮುಖ ಆಧಾರ. ಆದರೆ, ದುರದೃಷ್ಟಕರ ಸಂಗತಿಯೆಂದರೆ ಭಾರತದಲ್ಲಿ ಸರಕಾರಿ ಶಾಲೆಗಳು ಸಂಪೂರ್ಣ ನಿರ್ಲಕ್ಷ್ಯಕ್ಕೊಳಪಟ್ಟಿವೆ. ಕರ್ನಾಟಕದಲ್ಲೂ ಸಹ ಸರಕಾರಿ ಶಾಲೆಗಳು ಶೋಚನೀಯ ಸ್ಥಿತಿಯಲ್ಲಿದ್ದು, ಈಗಾಗಲೇ ಸಾವಿರಾರು ಸರಕಾರಿ ಕನ್ನಡ ಶಾಲೆಗಳು ಬಾಗಿಲು ಮುಚ್ಚಿವೆ. ಈ ಹಿನ್ನೆಲೆಯಲ್ಲಿ ಸುನಿಲ್ಕುಮಾರ್ ಅವರು ಗ್ರಾಮೀಣ ಪ್ರದೇಶದಲ್ಲಿರುವ ಹಾಗೂ ಸರಕಾರಿ ಕನ್ನಡ ಶಾಲೆಗಳನ್ನು ಉಳಿಸಿ, ಅಭಿವೃದ್ದಿಪಡಿಸಲು ಶ್ರಮಿಸುತ್ತಿದ್ದಾರೆ.

‘ಯೂಥ್ ಫಾರ್ ನೇಷನ್’ ಎಂಬ ಸಾಮಾಜಿಕ ಸಂಘಟನೆಯನ್ನು ಕಟ್ಟಿ ಬೆಳೆಸಿದ ಇವರು, ಈ ಸಂಘಟನೆಯ ರಾಷ್ಟೀಯ ಪ್ರಧಾನ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿ ಯುವಜನರ ಸಬಲೀಕರಣಕ್ಕೆ ಶ್ರಮಿಸಿದ್ದಾರೆ . ಆ ಮೂಲಕ ನೂರಾರು ಯುವಕರ ತಂಡಗಳನ್ನು ಕಟ್ಟಿಕೊಂಡು ನಾನಾ ಸಾಮಾಜಿಕ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುತ್ತಾ ಹಾಗೂ ಕಾರ್ಪೊರೇಟ್ ಸಂಸ್ಥೆಗಳು, ಸಾಮಾಜಿಕ ಉದ್ದಿಮೆದಾರರು ಮತ್ತು ನಾನಾ ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ದೇಶದ ಅಭಿವೃದ್ದಿಗೆ ತಮ್ಮದೇ ಆದ ರೀತಿಯಲ್ಲಿ ಶ್ರಮಿಸುತ್ತಿದ್ದಾರೆ.


ಹಾಗಾಗಿ, ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಸುನಿಲ್ಕುಮಾರ್ ಅವರು ನೀಡಿರುವ ಕೊಡುಗೆಗಳನ್ನು ಪರಿಗಣಿಸಿ ಅಂತಾರಾಷ್ಟ್ರೀಯ ಮಟ್ಟದ ಈ ಶಿಕ್ಷಣ ಸಮ್ಮೇಳನದಲ್ಲಿ ಹಲವು ದೇಶಗಳ ಶಿಕ್ಷಣ ತಜ್ಞರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸುನಿಲ್ಕುಮಾರ್, ‘ಕಿರಿಯ ವಯಸ್ಸಿಗೆ ಪಡೆದಿರುವ ಈ ಅಂತಾರಾಷ್ಟ್ರೀಯ ಮಟ್ಟದ ಈ ಪ್ರಶಸ್ತಿ ಸಂತಸ ತಂದಿದೆ. ಹಾಗೂ, ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಮುಂಬರುವ ದಿನಗಳಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಸಮಾಜಿಕ ಕಾರ್ಯಗಳಿಗೆ ಮತ್ತಷ್ಟು ಒತ್ತು ನೀಡುತ್ತೇನೆ. ಆ ಮೂಲಕ ನಮ್ಮ ಗ್ರಾಮೀಣ ಭಾಗದ ಶೈಕ್ಷಣಿಕ ವ್ಯವಸ್ಥೆಯ ಸುಧಾರಣೆಗೆ ಶ್ರಮಿಸುತ್ತೇನೆ. ನನ್ನ ಈ ಸಾಧನೆಗೆ ಬೆಂಬಲ ನೀಡಿದ ನನ್ನ ಪೋಷಕರು, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಧನ್ಯವಾದಗಳು,’’ ಎಂದು ಹೇಳಿದರು.

- Advertisement -

Latest Posts

Don't Miss