ಉತ್ತರಕನ್ನಡ : ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು ಅದಕ್ಕೆ ವರನಟ ಡಾ ರಾಜ್ ಕುಮಾರ್ ಪುತ್ರ ಶಿವರಾಜ್ ಕುಮಾರ್ ನೇತೃತ್ವ ವಹಿಸಬೇಕು ಅನ್ನುವ ಒತ್ತಾಯ ಕೇಳಿಬಂದಿದೆ..
ಉತ್ತರಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಮಾತನಾಡಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಗೋಕಾಕ್ ಹೋರಾಟ ಮಾಡಬೇಕು. ಅಲ್ಲದೇ ಸರೋಜಿನಿ ಮಹಿಷಿ ವರದಿ ಜಾರಿ ಮಾಡಲು ದೊಡ್ಡ ಹೋರಾಟ ಮಾಡಬೇಕು. ಈ ಹೋರಾಟಕ್ಕೆ ಶಿವರಾಜ್ ಕುಮಾರ್ ನೇತೃತ್ವ ವಹಿಸಬೇಕು. ಶಿವಣ್ಣನಿಗೆ ನಟರುಗಳಾದ ಪುನೀತ್ ರಾಜ್‍ಕುಮಾರ್, ಸುದೀಪ್, ದರ್ಶನ್, ಯಶ್ ಬೆಂಬಲಕ್ಕೆ ನಿಲ್ಲಬೇಕು ಎಂದು ಮನವಿ ಮಾಡಿದ್ರು.. ಪತ್ರಿಕಾಗೋಷ್ಠಿಯಲ್ಲಿ ಕದಂಬ ಸೈನ್ಯ ರಾಜ್ಯಾದ್ಯಕ್ಷ ಬೇಕ್ರಿ ರಮೇಶ್, ಉತ್ತರ ಕನ್ನಡ ಜಿಲ್ಲಾ ಸಂಚಾಲಕ ಪುರಂದರ ನಾಯ್ಕ ಗಣಪತಿ ನಾರಾಯಣ ನಾಯ್ಕ ಪ್ರಮುಖರು ಉಪಸ್ಥಿತರಿದ್ದರು.
ಕನ್ನಡಿಗರಿಗೆ ಖಾಸಗಿ ಕ್ಷೇತ್ರದಲ್ಲಿ ಉದ್ಯೋಗ ಮೀಸಲಾತಿ ಕೊಡುವುದರ ಬಗ್ಗೆ ನಿಮ್ಮ ಅಭಿಪ್ರಾಯ ಕಾಮೆಂಟ್ ಮಾಡಿ