Sunday, September 8, 2024

Latest Posts

ನಾನು ಬದುಕಿರುವವರೆಗೆ ಕನ್ನಡಿಗನೇ, ಆರ್.ಸಿ.ಬಿ ಯ ಹೆಮ್ಮೆಯ ಅಭಿಮಾನಿಯೇ: ಸಿಎಂ ಸಿದ್ದರಾಮಯ್ಯ

- Advertisement -

Political News: ಕಾಂಗ್ರೆಸ್‌ಗೆ ಸಪೋರ್ಟ್ ಮಾಡುತ್ತಿರುವ ಡಿಎಂಕೆ ಪಕ್ಷ, ತಾವು ಅಧಿಕಾರಕ್ಕೆ ಬಂದ್ರೆ, ಮೇಕೆದಾಟು ಕೇಸ್ ಕ್ಲೋಸ್ ಮಾಡುತ್ತೇವೆ ಎಂದು ತನ್ನ ಪ್ರಣಾಳಿಕೆಯಲ್ಲಿ ಬರೆದಿದೆ. ಈ ಬಗ್ಗೆ ಎಲ್ಲ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದು, ಈಗೇನಂತಾರೆ ಕಾಂಗ್ರೆಸ್ಸಿಗರು ಅಂತಾ ಪ್ರಶ್ನಿಸಿದ್ದಾರೆ. ಈ ಪ್ರಶ್ನೆಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಟಕ್ಕರ್ ಕೊಟ್ಟಿದ್ದಾರೆ.

ಮೇಕೆದಾಟು ಯೋಜನೆ ಜಾರಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದಾಗ ನಮ್ಮ ಮೇಲೆ ಮೊಕದ್ದಮೆ ದಾಖಲಿಸಿದವರು ನೀವೇ, ಕಾವೇರಿ ನೀರು ಹಂಚಿಕೆಯಲ್ಲಿ ನಾಡಿಗೆ ಅನ್ಯಾಯ ಆಗುತ್ತಿದ್ದಾಗ ಹಲವು ಬಾರಿ ಮನವಿ ಮಾಡಿದರೂ ಮಧ್ಯಪ್ರವೇಶಿಸದೆ ಕನ್ನಡಿಗರನ್ನು ಸಂಕಷ್ಟಕ್ಕೆ ತಳ್ಳಿದವರು ನಿಮ್ಮದೇ ಪ್ರಧಾನಿಗಳು, ನಿಮ್ಮದೇ ಪಕ್ಷದ ರಾಜ್ಯಾಧ್ಯಕ್ಷ ತಮಿಳುನಾಡಿನಲ್ಲಿ ಕಾವೇರಿ ನೀರಿಗಾಗಿ ಹೋರಾಟ ನಡೆಸುತ್ತಾರೆ, ಮೇಕೆದಾಟು ಯೋಜನೆ ವಿರುದ್ಧ ಉಪವಾಸ ಸತ್ಯಾಗ್ರಹ ಕೂರುತ್ತಾರೆ,

ಮೇಕೆದಾಟು ಯೋಜನೆಯ ಜಾರಿಗೆ ನಾವು ಎಂ.ಕೆ ಸ್ಟಾಲಿನ್‌ ಅವರ ಅನುಮತಿಗಾಗಿ ಕಾದು ಕುಳಿತಿಲ್ಲ, ನಮಗೆ ಅನುಮತಿ ಬೇಕಿರುವುದು ಕೇಂದ್ರ ಸರ್ಕಾರದ್ದು. ನಿಮ್ಮದೇ ಪಕ್ಷದ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಿದರೆ ನಾಳೆಯಿಂದಲೇ ಅಣೆಕಟ್ಟು ಕೆಲಸ ಆರಂಭ ಮಾಡಲು ನಾವು ತಯಾರಿದ್ದೇವೆ.. ತಮಿಳುನಾಡಿಗೆ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ಸುಳ್ಳು ಸುದ್ದಿಯ ಮೂಲಕ ಜನರನ್ನು ತಪ್ಪುದಾರಿಗೆ ಎಳೆಯುವುದನ್ನು ನಿಲ್ಲಿಸಿ.

ಬಿಜೆಪಿ.. ನನ್ನ ಭಾವಚಿತ್ರಕ್ಕೆ ಹಳದಿ ಬಣ್ಣದ ಜೆರ್ಸಿ ಹಾಕಿ ನನ್ನ ಬದ್ಧತೆಯನ್ನು ಅವಮಾನಿಸಬೇಡಿ, “ನಾನು ಬದುಕಿರುವವರೆಗೆ ಕನ್ನಡಿಗನೆ, ಆರ್.ಸಿ.ಬಿ ಯ ಹೆಮ್ಮೆಯ ಅಭಿಮಾನಿಯೇ” ಎಂದು ಸಿದ್ದರಾಮಯ್ಯ ಬಿಜೆಪಿ ಪ್ರಶ್ನೆಗೆ ಉತ್ತರಿಸಿದ್ದಾರೆ.
https://karnatakatv.net/along-with-maritibbe-gowda-many-people-from-bjp-and-jds-joined-the-congress/
https://karnatakatv.net/with-what-face-do-you-call-me-a-dalit-supporter-pritam-lash-out-at-priyank/
https://karnatakatv.net/25-thousand-to-kota-srinivasa-pujari-churumuri-shop-owner-who-gave-election-deposit/
- Advertisement -

Latest Posts

Don't Miss