- Advertisement -
ಲಿಂಗಾಯತ ಸ್ವಾಮೀಜಿಯ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಕನ್ನೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳಿಗೆ, ವಿಜಯಪುರ, ಬಾಗಲಕೋಟೆ ನಂತರ ಧಾರವಾಡ ಜಿಲ್ಲೆಗೆ ಪ್ರವೇಶ ನಿಷೇಧ ಹೇರಲಾಗಿದೆ. ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.
ನವೆಂಬರ್ 7ರಂದು ಅಣ್ಣಿಗೇರಿಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಕ್ಕೆ ಕನ್ನೇರಿ ಶ್ರೀಗಳನ್ನು ಆಹ್ವಾನಿಸಲಾಗಿತ್ತು. ಆದರೆ ಬಸವಪರ ಸಂಘಟನೆಗಳು ಹಾಗೂ ಲಿಂಗಾಯತ ಮುಖಂಡರು ಶ್ರೀಗಳ ಆಗಮನಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಶಾಂತಿ ಕಾಪಾಡುವ ನಿಟ್ಟಿನಲ್ಲಿ ನಿರ್ಬಂಧಕಾಜ್ಞೆ ಜಾರಿಗೊಳಿಸಿದ್ದು, ಕನ್ನೇರಿ ಶ್ರೀಗಳ ಜಿಲ್ಲೆಗೆ ಪ್ರವೇಶವನ್ನು ತಡೆಹಿಡಿದಿದೆ. ಅಶಾಂತಿ ಉಂಟಾಗುವ ಸಾಧ್ಯತೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ವರದಿ: ರಂಜಿತ ರೇವಣ್ಣ ನಾಟನಹಳ್ಳಿ
- Advertisement -

