ಕಾಂತರಾ ಸಿನಿಮಾ ಮತ್ತೆ ಕೋರ್ಟ್ ನಲ್ಲಿ..!
ಕಾಂತರಾ ಸಿನಿಮಾ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದ ನಟ ಚೇತನ್ ಕುಮಾರ್ ವಿರುದ್ಧ ದೂರು ದಾಖಲಾಗಿತ್ತು. ಚೇತನ್ ಕುಮಾರ್ ಅವರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ಎಫ್‍ಐಆರ್ ರದ್ದುಪಡಿಸಲು ಮತ್ತು ಮುಂದುವರಿಯಲು ನಿರಾಕರಿಸಿರುವ ಹೈಕೋರ್ಟ್, ಕನ್ನಡ ಚಿತ್ರರಂಗದ ನಟ ಚೇತನ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದೆ.
ನಟ ಚೇತನ್ ಕುಮಾರ್ ವಿರುದ್ಧ ದೂರು ದಾಖಲಾಗಿತ್ತು. ನಟ ಚೇತನ್ ಕುಮಾರ್ ನೀಡಿದ ಹೇಳಿಕೆಗಳು ಪರಿಗಣಿಸಿದಂತೆ ಅಪರಾಧವಾಗಿದೆಯೇ ಅಥವಾ ಇಲ್ಲವೇ ಎಂಬ ಕುರಿತು ತನಿಖೆ ನಡೆಯುತ್ತಿತ್ತು.
ಪೊಲೀಸ್ ಸರಿಯಾದ ತನಿಖೆಯಿಲ್ಲದೆ ಯಾಂತ್ರಿಕವಾಗಿ ಆರೋಪಪಟ್ಟಿ ಸಲ್ಲಿಸುವುದಿಲ್ಲ ಎಂದು ಹೇಳಬೇಕಾಗಿಲ್ಲ. ಅರ್ಜಿದಾರರು ಅಗತ್ಯ ಜಾಮೀನು ಪಡೆಯಲು ಸೂಕ್ತವಾದ ನ್ಯಾಯಾಲಯವನ್ನು ಸಂಪರ್ಕಿಸಲು ಯಾವಾಗಲೂ ಸ್ವಾತಂತ್ರ್ಯವನ್ನು ಹೊಂದಿರುತ್ತಾರೆ.
ಚೇತನ್ ಹೇಳಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ರಿಷಬ್ ತಂದೆ ಭಾಸ್ಕರ್ ಶೆಟ್ಟಿ ಸೇರಿದಂತೆ ಕರಾವಳಿಯ ದೈವಾರಾಧಕರು, ದೈವ ನರ್ತಕರು, ರಿಷಬ್ ಶೆಟ್ಟಿ ಅಭಿಮಾನಿಗಳು ಚೇತನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಮಂಗಳೂರಿಗೆ ಬಂದು ಈ ರೀತಿಯ ಹೇಳಿಕೆ ನೀಡಿ ಅಂತ ಸವಾಲು ಹಾಕಿದ್ದರು