Karachi:
12 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಭಾರತದ ವಿಮಾನ ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿರುವ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಲ್ಲಿ ಲ್ಯಾಂಡ್ ಆಗಿದೆ. ಈ ವಿಶೇಷ ವಿಮಾನವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಮಧ್ಯಾಹ್ನ 12.10ಕ್ಕೆ (ಪಾಕಿಸ್ತಾನದ ಸಮಯದ ಪ್ರಕಾರ) ಕರಾಚಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು ಎಂದು ತಿಳಿದು ಬಂದಿದೆ.
ಅಂತಾರಾಷ್ಟ್ರೀಯ ಚಾರ್ಟರ್ ವಿಮಾನವು ಭಾರತದಿಂದ ಪಾಕಿಸ್ತಾನದಲ್ಲಿ ಲ್ಯಾಂಡ್ ಆಗಿದೆ. ಆದರೆ, ಅದನ್ನು ಹೊರತುಪಡಿಸಿ ಪಾಕಿಸ್ತಾನದಿಂದ ಯಾವುದೇ ಸಂಬಂಧವಿಲ್ಲ ಎಂಬುವುದಾಗಿ ಭಾರತದ ನಾಗರಿಕ ವಿಮಾನಯಾನ ಪ್ರಾಧಿಕಾರದ ವಕ್ತಾರರು ಈ ಕುರಿತು ಖಚಿತಪಡಿಸಿದ್ದಾರೆ.
ಭಾರತದ ವಿಮಾನ ಕರಾಚಿಯಲ್ಲಿ ಇಳಿದ ಸ್ವಲ್ಪ ಸಮಯದ ನಂತರ 12 ಪ್ರಯಾಣಿಕರೊಂದಿಗೆ ಮತ್ತೆ ಹಾರಾಟ ನಡೆಸಿತು. ಕರಾಚಿ ವಿಮಾನ ನಿಲ್ದಾಣದಲ್ಲಿ ಆ ವಿಶೇಷ ವಿಮಾನ ಏಕೆ ಇಳಿದಿದೆ ಎಂಬುದು ಇನ್ನೂ ನಿಗೂಢ.