Hassan News: ಹಾಸನ: ಹಾಸನ ಜಿಲ್ಲೆಯ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಒತ್ತಾಯಿಸಿ, ಇಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರವೇ ನಾರಾಯಣಗೌಡರ ಬಣದವರು, ಜಿಲ್ಲಾಧಿಕಾರಿ ಕಚೇರಿ ಮುಂದೆ ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ದು, ಉಸ್ತುವಾರಿ ಸಚಿವರ ವಿರುದ್ಧ ಕರವೇ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಸನದ 7 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವವರೆಗೂ ನಾವು ಪಟ್ಟು ಬಿಡುವುದಿಲ್ಲವೆಂದು ಕರವೇ ಕಾರ್ಯಕರ್ತರು ಹೇಳಿದ್ದಾರೆ.
ರಾಜ್ಯ ಸರ್ಕಾರ ಜಿಲ್ಲೆಯನ್ನು ಮಲತಾಯಿ ಧೋರಣೆಯಿಂದ ನೋಡುತ್ತಿದೆ. ಅಕ್ಕಪಕ್ಕದ ಜಿಲ್ಲೆಯನ್ನು ಬರಪೀಡಿತವೆಂದು ಘೋಷಣೆ ಮಾಡಲಾಗಿದೆ. ಆದರೆ ಈಗಾಗಲೇ ಹಾಸನದಲ್ಲಿ ತುಂಬಾ ಬರಗಾಲವಿದೆ. ಇಲ್ಲಿನ ಉಸ್ತುವಾರಿ ಸಚಿವರಿಗೆ ಹಾಸನ ಅಭಿವೃದ್ಧಿ ವಿಚಾರವಾಗಿ ಒಂದು ಚೂರು ಕಾಳಜಿ ಇಲ್ಲ. ಉಸ್ತುವಾರಿ ಸಚಿವರ ಬೇಜವಾಬ್ದಾರಿತನದಿಂದ ಹಾಸನ ಜಿಲ್ಲೆಯನ್ನು ಬರಗಾಲ ಎಂದು ಘೋಷಿಸಿಲ್ಲ. ಹೀಗೆ ಆದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕರವೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಅದ್ಧೂರಿಯಾಗಿ ನೆರವೇರಿದ ಚಿತ್ರದುರ್ಗದ ಹಿಂದೂ ಮಹಾಗಣಪತಿ ಉತ್ಸವ ಯಾತ್ರೆ..
ರಾಷ್ಟ್ರ ನಿರ್ಮಾತೃ ಪ್ರಶಸ್ತಿ ಪಡೆದ ವಿದ್ಯಾರ್ಥಿ ಸ್ನೇಹಿ ಶಿಕ್ಷಕ ನಾಗಭೂಷಣ್