www.karnatakatv.net: ಬೆಳಗಾವಿ: ಸೆ.14 ರಾಷ್ಟ್ರೀಯ ಹಿಂದಿ ದಿನವಾಗಿ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಕೇಂದ್ರ ಸರ್ಕಾರ ದೇಶದಲ್ಲಿ ಸಂವಿಧಾನ ಬಾಹಿರವಾಗಿ ಹಿಂದಿಯನ್ನು ಹೇರುತ್ತಿದೆ ಎಂದು ಆರೊಪಿಸಿ ಕರ್ನಾಟಕ ರಕ್ಷಣಾವೇದಿಕೆ ಕಾರ್ಯಕರ್ತರು ಇಂದು ಬೆಳಗಾವಿ ಚೆನ್ನಮ್ಮಾ ವೃತ್ತದಲ್ಲಿ ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನಗರದ ಚೆನ್ನಮ್ಮಾ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿ ವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿ, ಕರವೆ ಶಿವರಾಮೇಗೌಡರು ದೇಶದಲ್ಲಿ ಕೆಂದ್ರ ಸರ್ಕಾರ ಅಕ್ರಮವಾಗಿ ಹಿಂದಿಯನ್ನು ಹೇರಲು ಹೊರಟಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಇದರ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಇನ್ನು ಹಿಂದಿ ಹೇರಿಕೆ ಕುರಿತಂತೆ ಕರವೆ ಮೋದಿ ಭಾವಚಿತ್ರ ಪ್ರದರ್ಶನ ಮಾಡಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೋಡಿ ಹಾಗೂ ಪೊಲೀಸರ ನಡುವೆ ಜಟಾಪಟಿ ನಡೆದ ಪ್ರಂಗ ಕೂಡ ಕಂಡು ಬಂತು. ಈಗಾಗಲೇ ಕೆಂದ್ರ ಸರ್ಕಾರದ ಹಿಂದಿ ಹೇರಿಕೆ ನೀತಿಯನ್ನು ಖಂಡಿಸಿ ಸಾಕಷ್ಟು ಸಂಘಟನೆಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಉಗ್ರ ಹೋರಾಟದ ಎಚ್ಚರಿಕೆಯನ್ನು ನೀಡುತ್ತಿವೆ. ಇನ್ನು ಸರ್ಕಾರ ಈ ಕುರಿತು ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಅನ್ನೋದನ್ನಾ ಕಾದು ನೋಡಬೇಕಿದೆ.
ನಾಗೇಶ್ ಕುಂಬಳಿ, ಕರ್ನಾಟಕ ಟಿವಿ- ಬೆಳಗಾವಿ