Sunday, September 8, 2024

Latest Posts

Karnataka ; ರಾಜ್ಯದಲ್ಲಿ ಬಾರಿ ಮಳೆ ; ತತ್ತರಿಸಿಹೋದ ಜನಸಾಮಾನ್ಯರು

- Advertisement -

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ.ರಾಜ್ಯದಲ್ಲಿ ಇನ್ನೂ 7 ದಿನಗಳ ಕಾಲ ಮಳೆಯಾಗಲಿದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗೋ ಸಂಭವವಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನೂ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇನ್ನೆರೆಡು ದಿನ ಜಿಟಿಜಿಟಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಆರೆಂಟ್ ಅಲರ್ಟ್ ಘೋಷಣೆ ಮಾಲಾಗಿದೆ.ರಾಜ್ಯದ ಹಲವೆಡೆ ವರುಣ ತನ್ನ ಆರ್ಭಟವನ್ನ ಮುಂದುವರೆಸಿದ್ದಾನೆ. ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಸಂಪರ್ಕ ಕಡಿತವಾಗಿದೆ. ನಿರಂತರ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.

- Advertisement -

Latest Posts

Don't Miss