ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ 17 ಮಂದಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಐವಾನ್ ಡಿಸೋಜಾ, ಕೆ. ಗೋವಿಂದರಾಜ್, ಜಗದೇವ ಗುತ್ತೇದಾರ್, ಬಲ್ಲೀಸ್ ಬಾನು, ಎನ್.ಎಸ್. ಬೋಸರಾಜು, ಡಾ. ಯತೀಂದ್ರ ಎಸ್., ಎ. ವಸಂತ ಕುಮಾರ, ಮುಲೆ ಮಾರುತಿರಾವ್, ಟಿ.ಎನ್. ಜವರಾಯಿ ಗೌಡ, ಸಿ.ಟಿ.ರವಿ ಮತ್ತು ಎನ್.ರವಿಕುಮಾರ್ ಪದಗ್ರಹಣ ಮಾಡಿದ್ರು.
ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ಆಯ್ಕೆಯಾದ ಚಂದ್ರಶೇಖರ ಪಾಟೀಲ ಬಸವರಾಜ, ಡಾ: ಧನಂಜಯ್ ಸರ್ಜಿ, ರಾಮೋಜಿಗೌಡ, ಎಸ್.ಎಲ್. ಭೋಜೇಗೌಡ, ಕೆ. ವಿವೇಕಾನಂದ ಹಾಗೂ ಡಿ.ಟಿ.ಶ್ರೀನಿವಾಸ ಅವರು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಧಾನ ಪರಿಷತ್ ನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು, ನ್ಯಾಯ ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ವಿಧಾನ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
Karnataka ; 17 ನೂತನ ಎಂಎಲ್ಸಿಗಳು ಪ್ರಮಾಣ ವಚನ ಸ್ವೀಕಾರ
- Advertisement -
- Advertisement -

