Bengaluru: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದು, ಹಲವರು ಈಗಾಗಲೇ ಅನಾರೋಗ್ಯಕ್ಕೀಡಾಗಿದ್ದಾರೆ. ಆದರೂ ಪ್ರತಿಭಟನೆ ಮಾಡೋದು ನಾವು ಬಿಡೋದಿಲ್ಲಾ ಅಂತಾ ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದು ಕೂತಿದ್ದಾರೆ.
ಕೆಲ ದಿನಗಳ ಹಿಂದೆ ಸಿಎಂ ಡಿ.ಕೆ.ಶಿವಕುಮಾರ್ ಕೆಲ ಆಶಾ ಕಾರ್ಯಕರ್ತೆಯರನ್ನು ಕರೆದು, ಸರ್ಕಾರದ ಖಜಾನೆಯಲ್ಲಿ ಅಷ್ಟೆಲ್ಲ ಹಣವಿಲ್ಲವೆಂದು ವಿವರಿಸಿದ್ದರು. ಆದರೂ ಆಶಾ ಕಾರ್ಯಕರ್ತೆಯರು ನಮ್ಮ ಬೇಡಿಕೆಗಳನ್ನು ನೀವು ಈಡೇರಿಸಲೇಬೇಕೆಂದು ಆಗ್ರಹಿಸಿದ್ದಾರೆ.
ಇದೀಗ ಇವರ ಪ್ರತಿಭಟನೆಗೆ ಬೆಂಬಲವಾಗಿ ವಾಟಾಳ್ ನಾಗರಾಜ್ ಬಂದಿದ್ದಾರೆ. ಕೇವಲ 1 ದಿನ ಮಾತ್ರ ಅವಕಾಶ ನೀಡಲಾಗಿದ್ದು, ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರದಿದ್ದಲ್ಲಿ, ರಾಜ್ಯವನ್ನು ಬಂದ್ ಮಾಡುವುದಾಗಿ ವಾಟಾಳ್ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮದ ಜತೆ ಮಾತನಾಡಿರುವ ವಾಟಾಳ್ ನಾಗರಾಜ್ ಆರು ದಿನಗಳಿಂದ ಮಳೆ, ಗಾಳಿ ಲೆಕ್ಕಿಸದೇ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಆದರೂ ರಾಜ್ಯ ಸರ್ಕಾರ ಅವರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರೋದನ್ನು ನಾನು ವಿರೋಧಿಸುತ್ತೇನೆ ಎಂದು ವಾಟಾಳ್ ಹೇಳಿದ್ದಾರೆ.
ಫ್ರೀಡಂ ಪಾರ್ಕ್ನಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಕೂಡ ಸರಿಯಾಗಿಲ್ಲ. ಇಂಥದ್ರಲ್ಲಿ ಆಶಾ ಕಾರ್ಯಕರ್ತೆಯರ ಪರಿಸ್ಥಿತಿ ನರಕಸದೃಶವಾಗಿದೆ. ಸರ್ಕಾರ ಕೂಡಲೇ ಸ್ಪಂದಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಲಿದ್ದೇವೆ. ಮತ್ತು ರಾಜ್ಯ ಬಂದ್ಗಾಗಿ ಕರೆ ನೀಡಲಿದ್ದೇವೆ ಎಂದು ರಾಜ್ಯ ಸರ್ಕಾರಕ್ಕೆ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ.




