ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನ. 23 ರಂದು ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ವಿಚಾರಣೆ ನಡೆಯಲಿದ್ದು, ಇಂದು ಈ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಸಭೆ ನಡೆಯಲಿದೆ. ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಬೀದರ, ಬಾಲ್ಕಿ, ಖಾನಾಪುರ, ಕಾರವಾರ, ಮುಂತದ ಗಡಿ ಭಾಗಗಳಲ್ಲಿರುವ 865 ಮರಾಠಿ ಭಾಷಿಕ ಪ್ರದೇಶಗಳು ಮಹಾರಾಷ್ಷ್ರಕ್ಕೆ ಸೇರಬೇಕು ಎಂಬ ವಾದವನ್ನು ಮಹಾರಾಷ್ಟ್ರ ಏಕೀಕರಣ ಸಮಿತಿ ಮಂಡಿಸಿತ್ತು. ಇದಕ್ಕೆ ಮಹಾರಾಷ್ಟ್ರ ಸರ್ಕಾರ ಸಹ ಬೆಂಬಲಿಸಿತ್ತು.
ಭಾರತದ ನೂತನ ಚುನಾವಣಾ ಆಯುಕ್ತರಾಗಿ ಅರುಣ್ ಗೋಯೆಲ್ ಅಧಿಕಾರ ಸ್ವೀಕಾರ
ಕಳೆದ 19 ವರ್ಷದಿಂದ ಮಹಾರಾಷ್ಟ್ರ- ಕರ್ನಾಟಕ ಗಡಿ ವಿವಾದದ ಬಗ್ಗೆ ವಿಚಾರಣೆ ನಡೆಯುತ್ತಲೇ ಇದೆ ಇನ್ನು ನ. 23ರಂದು ಸುಪ್ರೀ ಕೋರ್ಟ್ ನಲ್ಲಿ ಅಂತಿಮ ನಿರ್ಧಾರ ತಿಳಿಯಲಿದೆ. ಮಹಾಜನ್ ವರದಿ ತಿರಸ್ಕರಿಸಿದ್ದ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತ. 2004ರಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ಮಹಾರಾಷ್ಟ್ರ ಸರ್ಕಾರ ಅರ್ಜಿ ಸಲ್ಲಿಸಿತ್ತುಇದರ ಬಗ್ಗೆ ನ.23 ರಂದು ವಿಚಾರಣೆ ನಡೆಯಲಿದೆ.