Political News: ಕರ್ನಾಟಕ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿಗ್ಗಾವಿ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ ಮಗ ಭರತ್ ಬೊಮ್ಮಾಯಿ ಸ್ಪರ್ಧಿಸುತ್ತಿದ್ದು, ಸ್ಯಾಂಡಲ್‌ವುಡ್‌ನಲ್ಲಿ ನಟನಾಗಿ ಅಭಿನಯಿಸಿದ್ದ ಬಂಗಾರು ಹನುಮಂತುರನ್ನು ಸಂಡೂರು ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಶಿಗ್ಗಾವಿಯಲ್ಲಿ ಮಾಜಿ ಸಿಎಂ ಬಸವರಾಾಜ ಬೊಮ್ಮಾಯಿ ಸ್ಪರ್ಧಿಸಿ ಗೆದ್ದಿದ್ದರು. ಆದರೆ, ಅದು ಅವರಿಗೆ ಲೋಕಸಭಾ ಚುನಾವಣೆಯಲ್ಲೂ ಗೆಲುವು ಸಿಕ್ಕ ಕಾರಣ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಇದೀಗ ಉಪಚುನಾವಣೆಗೆ ತಮ್ಮ ಮಗನಿಗೆ ಟಿಕೇಟ್ ಕೊಡಿಸಲು ಬೊಮ್ಮಾಯಿ ಸಫಲರಾಗಿದ್ದು, ಭರತ್ ಬೊಮ್ಮಾಯಿ ಮೊದಲ ಬಾರಿ, ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ಇನ್ನು ಸಂಡೂರು ಬಿಜೆಪಿ ಅಭ್ಯರ್ಥಿಯಾಗಿರುವ ಬಂಗಾರು ಹನುಮಂತು, ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ನಿಂತು ಸೋಲನ್ನಪ್ಪಿದ್ದು, ಇದೀಗ ಮತ್ತೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.