ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ.
ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಶಾಸಕರು ಮತಚಲಾವಣೆ ಮಾಡಲಿದ್ದಾರೆ. ಇಂದಿನ ವಿಶ್ವಾಸ ಮತಯಾಚನೆಗೆ ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್, ಹಿರೇಕೆರೂರು ಶಾಸಕ ಬಿ.ಸಿಪಾಟೀಲ್,ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ, ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ.ಗೋಪಾಲಯ್ಯ,ಕೆ.ಆರ್ ಪುರಂ ಶಾಸಕ ಬೈರತಿ ಬಸವರಾಜ್, ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ ಸೋಮಶೇಖರ್,ಚಿಕ್ಕಬಳ್ಳಾಪುರ ಶಾಸಕ ಡಾ.ಕೆ ಸುಧಾಕರ್, ಹೊಸಕೋಟೆ ಶಾಸಕ ಎಂ.ಟಿ.ಬಿ ನಾಗರಾಜ್, ಬಳ್ಳಾರಿಯ ವಿಜಯನಗರ ಶಾಸಕ ಆನಂದ್ ಸಿಂಗ್, ಶಿವಾಜಿನಗರ ಕಾಂಗ್ರೆಸ್ ಶಾಸಕ ರೋಷನ ಬೇಗ್, ರಾಣೇಬೆನ್ನೂರಿನ ಪಕ್ಷೇತರ ಶಾಸಕ ಆರ್.ಶಂಕರ್, ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್, ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಆರ್.ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ, ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಎಚ್.ವಿಶ್ವನಾಥ್,ಗೋಕಾಕ್ ಕ್ಷೇತ್ರದ ರಮೇಶ್ ಜಾರಕಿಹೊಳಿ, ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ಅಥಣಿ ಶಾಸಕರ ಮಹೇಶ್ ಕುಮಟಳ್ಳಿ ಗೈರು ಹಾಜರಾಗಿದ್ದಾರೆ. ಹೀಗಾಗಿ ದೋಸ್ತಿ ಸರ್ಕಾರಕ್ಕೆ ಬಹುಮತ ಸಾಬೀತು ಪಡಿಸೋದು ಕಷ್ಟಸಾಧ್ಯವೆಂಬುದು ಖಚಿತವಾಗಿದೆ.
ಭಿನ್ನಮತಕ್ಕೆ ಬ್ರೇಕ್ ಹಾಕಿದ್ರಾ ರೇವಣ್ಣ ಪತ್ನಿ..?ಮಿಸ್ ಮಾಡದೇ ಈ ವಿಡಿಯೋ ನೋಡಿ