ಮೇ.28ಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಚುನಾವಣೆ: ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಭಾ.ಮಾ ಹರೀಶ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇದೇ ಮೇ 28ರಂದು ಚುನಾವಣೆ ನಡೆಯಲಿದ್ದು, ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಭಾ.ಮ. ಹರೀಶ್​ ನಾಮಪತ್ರ ಸಲ್ಲಿಸಿದ್ದಾರೆ.

ಎರಡು ವರ್ಷಕ್ಕೊಮ್ಮೆ ವಾಣಿಜ್ಯ ಮಂಡಳಿ ಚುನಾವಣೆ ನಡೆಯುತ್ತದೆ. ಆದರೆ ಕೊರೋನಾ ಕಾರಣದಿಂದ ಚುನಾವಣೆ ಮುಂದೂಡಲಾಗಿತ್ತು.
ಹೀಗಾಗಿ ಅಧ್ಯಕ್ಷರ ಸ್ಥಾನದಲ್ಲಿ ಜೈರಾಜ್​ ಅವರೇ ಮುಂದುವರಿದಿದ್ದರು. ಈಗ ಮುಂದಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆಗಾಗಿ ಮತ್ತೆ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಮುಂಚೂಣಿಯಲ್ಲಿ ಭಾ.ಮ.ಹರೀಶ್ ಹೆಸ್ರು ಕೇಳಿಬಂದಿದೆ.

ಮೇ.28ಕ್ಕೆ ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಘೋಷಣೆಯಾಗಿದೆ. ಇಂದು ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಭಾ ಮ ಹರೀಶ್ ನಾಮಪತ್ರವನ್ನು ಸಲ್ಲಿಸಿದ್ದಾರೆ.

About The Author