- Advertisement -
ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಾತ್ಕಾಲಿಕ ಪರಿಹಾರವಾಗಿ ಪ್ರವಾಹಕ್ಕೆ ತುತ್ತಾಗಿರುವ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು ಕಡೆ ಪ್ರವಾಹಕ್ಕೆ ಸಿಲುಕಿ ಮನೆಗಳು ಸಂಪೂರ್ಣವಾಗಿ ಹಾಳಾಗಿವೆ. ಅವರು ಹೊಸ ಮನೆ ಕಟ್ಟಿಕೊಳ್ಳಬೇಕಿದೆ. ಹಾಗಾಗಿ ಇಂತಹ ಕುಟುಂಬಗಳಿಗೆ ಮನೆ ಕಟ್ಟಲು 5 ಲಕ್ಷ ರೂ. ನೀಡಲಾಗುವುದು. ಜೊತೆಗೆ ಹೊಸ ಮನೆ ನಿರ್ಮಾಣವಾಗುವ ವರೆಗೆ ಸಂತ್ರಸ್ತರಿಗೆ ಬಾಡಿಗೆಯಾಗಿ ಪ್ರತಿ ತಿಂಗಳು 5 ಸಾವಿರ ರೂ. ಬಾಡಿಗೆ ಪಾವತಿಸಲಾಗುವುದು. ಇನ್ನು ಭಾಗಶಃ ಹಾಳಾಗಿರುವ ಮನೆಗಳ ದುರಸ್ತಿಗಾಗಿ 1 ಲಕ್ಷ ರೂ. ನೀಡಲಾಗುವುದು ಎಂದು ಬಿಎಸ್ವೈ ತಿಳಿಸಿದರು.
- Advertisement -