Sunday, December 1, 2024

Latest Posts

ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಕಾಂಗ್ರೆಸ್ ಪಣ-ಪ್ರಲ್ಹಾದರ್ ಜೋಶಿ ಅಸಮಾಧಾನ

- Advertisement -

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಹಾಗೂ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಸಹ “ಕರ್ನಾಟಕದಲ್ಲಿ ಇಂತಹ ಘಟನೆಗಳು ಹೊಸತೇನಲ್ಲ” ಎಂದಿರುವ ಗೃಹ ಸಚಿವ ಪರಮೇಶ್ವರ ಅವರು ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪ್ರಶ್ನಿಸಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಘಟನೆ ಬಗ್ಗೆ ವೀಡಿಯೋ ಹೇಳಿಕೆ ನೀಡಿರುವ ಪ್ರಲ್ಹಾದ್ ಜೋಶಿಯವರು, ಶಿವಮೊಗ್ಗದಲ್ಲಿ ಗಲಭೆ ನಡೆಯಲು ನೇರವಾಗಿ ರಾಜ್ಯ ಕಾಂಗ್ರೆಸ್ ಸರಕಾರವೇ ಬೆಂಬಲವಾಗಿ ನಿಂತಿದೆ. ಇದರೊಂದಿಗೆ ಕರ್ನಾಟಕವನ್ನು ಗೂಂಡಾರಾಜ್ಯ ಮಾಡಲು ಈ ಸರಕಾರ ಪಣತೊಟ್ಟಂತಿದೆ. ಕಾಂಗ್ರೆಸ್ ಆಡಳಿತದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸರಕಾರ ಬಂದಾಗಿನಿಂದ ಒಂದೆಡೆ ಹಿಂದೂಗಳ ಹಬ್ಬಕ್ಕೆ ನಿರ್ಬಂಧ ಮತ್ತೊಂದೆಡೆ ಮತಾಂಧ ಶಕ್ತಿಗಳ ಅಟ್ಟಹಾಸಕ್ಕೆ ಬೆಂಬಲ ನೀಡುತ್ತಿದೆ. ಮತಾಂಧ ಶಕ್ತಿಗಳನ್ನು ಪೋಷಿಸಿ ಬೆಳೆಸಲೆಂದೇ ಈ ಸರಕಾರ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಸಚಿವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇನ್ನು ಈ ಪ್ರಕರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿರುವ ಸಚಿವರು ಮಾತೆತ್ತಿದರೆ ನುಡಿದಂತೆ ನಡೆದಿದ್ದೇವೆ ಎನ್ನುತ್ತಾರೆ, ಅವರು ನುಡಿದಂತೆ ನಡೆದದ್ದು ಇದೇನಾ ಎಂದು ಪ್ರಶ್ನಿಸಿದ್ದಾರೆ.

ಅಂದು ನಾಡ ವಿರೋಧಿ ಟಿಪ್ಪುವಿನ ವಿಜೃಂಭಣೆ ಮಾಡಿದಿರಿ, ಇಂದು ರಾಷ್ಟ್ರ ವಿರೋಧಿ ಔರಂಗಜೇಬನ ವಿಜೃಂಭಣೆಯಾಗುತ್ತಿದೆ. ನಮ್ಮ ಕರ್ನಾಟಕ ಎತ್ತ ಸಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಆತಂಕ ವ್ಯಕ್ತಪಡಿಸಿದ್ದಾರೆ.

Puneeth Rajkumar : ರಾತ್ರಿ ಬೆಳಗಾಗೋದ್ರೊಳಗೆ ಅಪ್ಪು ಪ್ರತಿಮೆ ಅನಾವರಣ…!

ನಮ್ಮ ಜಾತಿಯವರು ಸಿಎಂ, ಮಂತ್ರಿ ಆಗಬೇಕು ಎನ್ನುವುದು ಬಿಡಿ;ಕೊತ್ತೂರು ಮಂಜುನಾಥ್

Metro: ರೀ ರೈಲು ಹಳಿ ತಪ್ಪಿದ ಹಿನ್ನೆಲೆ ಮೆಟ್ರೋ ಸಂಚಾರ ವ್ಯತ್ಯಯ;

- Advertisement -

Latest Posts

Don't Miss