ಸಾರಿಗೆ ನೌಕರರಿಗೆ ಭರ್ಜರಿ ಗುಡ್ ನ್ಯೂಸ್!

 www.karnatakatv.net: ಬೆಂಗಳೂರು: ಕೊರೊನಾ ಸಾಂಕ್ರಾಮಿಕದ 2ನೇ ಅಲೆ ಹಿನ್ನೆಲೆ ಸಾರಿಗೆ ನೌಕರರಿಗೆ ಜೂನ್ ತಿಂಗಳ ವೇತನವನ್ನು ಪಾವತಿಸಲು ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ೆಂ ಸತ್ಯವತಿ ಆದೇಶ ಹೊರಡಿಸಿದ್ದಾರೆ.

ಸಾರಿಗೆ ಸಿಬ್ಬಂದಿಯ ವೇತನಕ್ಕೆಂದೇ ರಾಜ್ಯ ಸರ್ಕಾರ ರಸ್ತೆ ಸಾರಿಗೆ ನಿಗಮಕ್ಕೆ ರೂ. 10176.00 ಲಕ್ಷ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ರೂ. 9862.00 ಲಕ್ಷಗಳು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ರೂ. 6642.00 ಲಕ್ಷಗಳು ಸೇರಿದಂತೆ ಒಟ್ಟು 32500.00 ಲಕ್ಷ ಅನುದಾನ ಬಿಡುಗಡೆ ಮಾಡಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಜೂನ್ 2021 ಎಲ್ ಇ ಸಂಗ್ರಹವಾದ ಸಾರಿಗೆ ಆದಾಯದಿಂದ ಇಂಧನ ವೆಚ್ಚ ಭರಿಸಲು ಕಷ್ಟವಾಗುತ್ತೆ. ಆದ್ದರಿಂದ ನಾಲ್ಕು ವಿಭಾಗಗಳ ಸಾರಿಗೆ ಸಂಸ್ಥೆಗಳಿಗೆ ಜೂನ್ 2021ರ ವೇತನವನ್ನು ಪಾವತಿಸಲು ರೂ. 325 ಕೋಟಿ ವಿಶೇಷ ಻ನುದಾನ ಬಿಡುಗಡೆ ಮಾಡುವಂತೆ ಕೋರಿರುತ್ತಾರೆ.

About The Author