ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿ ಆರಂಭಿಸೋದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಅಕ್ಟೋಬರ್ 25ರಿಂದ ಪ್ರಾಥಮಿಕ ಹಂತದ ಶೇ 50ರಷ್ಟು ವಿದ್ಯಾರ್ಥಿಗಳ ಹಾಜರಾತಿಗೆ ಸರ್ಕಾರ ಸಮ್ಮತಿ ನೀಡಿದೆ. ಇನ್ನು ಶಾಲೆ ಆರಂಭ ಕುರಿತಾಗಿ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಈ ತೀರ್ಮಾನ ಕೈಗೊಳ್ಳಲಾಗಿದೆ. ಇನ್ನು ಇದಕ್ಕಾಗಿ ಸರ್ಕಾರ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಗೊಳಿಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರು ಖಡ್ಡಾಯವಾಗಿ 2 ಲಸಿಕೆ ಪಡೆದಿರಬೇಕು, ಶಾಲೆಗೆ ಮಕ್ಕಳನ್ನು ಕಳುಹಿಸೋದಕ್ಕೆ ಪೋಷಕರ ಅನುಮತಿ ಖಡ್ಡಾಯ, ಒಂದು ಮೀಟರ್ ದೈಹಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಪಾಲಿಸೋ ಮೂಲಕ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಬೇಕು ಅಂತ ತಿಳಿಸಿದೆ.
ಜೊತೆಗೆ ಸೋಂಕಿನ ಯಾವುದೇ ಲಕ್ಷಣ ಇಲ್ಲದ ವಿದ್ಯಾರ್ಥಿಗಳು ಮಾತ್ರ ಶಾಲೆಗೆ ಹಾಜರಾಗಬೇಕು ಅಂತಲೂ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.