Friday, August 8, 2025

Latest Posts

ಕೊನೆಗೂ ಮಣಿದ ಸರ್ಕಾರ..ಚಿತ್ರಮಂದಿರಗಳಲ್ಲಿ 100% ರಷ್ಟು ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್…!

- Advertisement -

ಪೂರ್ಣ ಪ್ರಮಾಣ ಚಿತ್ರಮಂದಿರಗಳನ್ನು ತೆರೆಯಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಕೇಂದ್ರ ಸರ್ಕಾರ 100% ರಷ್ಟು ಸೀಟು ಅನುಮತಿ‌ ನೀಡಿದ್ರು, ರಾಜ್ಯ ಸರ್ಕಾರ ಮಾತ್ರ 50% ಆಸನ ಭರ್ತಿಗೆ ಅವಕಾಶ ನೀಡಿತ್ತು. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಗಾಂಧಿನಗರದ ಮಂದಿ ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆ ಇಂದು ಲೀಡರ್ ಶಿವರಾಜ್ ಕುಮಾರ್ ನೇತೃತ್ವದದಲ್ಲಿ ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ವಾಣಿಜ್ಯ ಚಲನಚಿತ್ರಮಂಡಳಿಯ ಅಧಿಕಾರಿಗಳು ಭಾಗಿಯಾಗಿದ್ರು.

ಸರ್ಕಾರದ ನಿರ್ಧಾರದ ಬಗ್ಗೆ ಬೇಸರ ವ್ಯಕ್ತಪಡಿಸಿದ ನಟ ಶಿವರಾಜ್ ಕುಮಾರ್, ಮಾತುಕತೆ ನಡೆಸಿ ನೀವು ನಿರ್ಧಾರ ತೆಗೆದುಕೊಳ್ಳಬೇಕಿತ್ತು. ಆದ್ರೆ ಏಕಾಏಕಿ ಈ ನಿರ್ಧಾರದಿಂದ ಕನ್ನಡ ಚಿತ್ರರಂಗಕ್ಕೆ ಕಷ್ಟವಾಗಿದೆ. ಎಲ್ಲಾ ಮುನ್ನೆಚ್ಚರಿಕೆ ಕ್ರಮದೊಂದಿಗೆ ಥಿಯೇಟರ್ ನಲ್ಲಿ ನೂರರಷ್ಟು ಆಸನ ಭರ್ತಿಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡರು. ಚಿತ್ರರಂಗದ ಹಿರಿಯ ನಟರ ಮನವಿಗೆ ಸ್ಪಂದಿಸಿದ ಸರ್ಕಾರ 100% ಆಸನ ಭರ್ತಿಗೆ ಅವಕಾಶ ನೀಡಿದೆ.

- Advertisement -

Latest Posts

Don't Miss