ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನಗಳಿಗೆ ಗಡುವು ವಿಸ್ತರಣೆ ಮಾಡಲು ಸರ್ಕಾರ ಮುಂದಾಗಿದೆ. HSRP ನಂಬರ್ ಪ್ಲೇಟ್ ಅಳವಡಿಕೆಗೆ ನೀಡಿದ್ದ ಗಡುವು ಅಂತ್ಯವಾದ ಹಿನ್ನೆಲೆಯಲ್ಲಿ ಮುಂದಿನ ಸೆಪ್ಟೆಂಬರ್ 15ರವರೆಗೆ ಡೆಡ್‌ಲೈನ್ ನೀಡಲಾಗಿದೆ.
ಹಲವು ಗಡುವುಗಳನ್ನು ನೀಡಿದರೂ ಬಹುತೇಕ ವಾಹನ ಮಾಲೀಕರು ಇನ್ನೂ ಅಳವಡಿಸಿಲ್ಲ. ಇದೀಗ ರಾಜ್ಯ ಸರ್ಕಾರ ಇನ್ನೂ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಮತ್ತಷ್ಟು ಸಮಯ ನೀಡಿದೆ. ಜೂನ್ 12ರ ಗುಡುವು ಅಂತ್ಯಗೊಂಡ ಬೆನ್ನಲ್ಲೇ ಜುಲೈ 4ರ ವರೆಗೆ ವಿಸ್ತರಿಸಲಾಗಿತ್ತು. ಇದೀಗ ಮಹತ್ವದ ಸಭೆ ನಡೆಸಿ ಇದೀಗ ಅಂತಿಮ ಗಡುವನ್ನು ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ.
ರಾಜ್ಯದ ಸರ್ಕಾರದ ನೂತನ ಆದೇಶದ ಪ್ರಕಾರ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಅವಕಾಶವಿದೆ. ಸೆಪ್ಟೆಂಬರ್ 16ರಿಂದ ದುಬಾರಿ ದಂಡ ವಿಧಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.