Tuesday, January 14, 2025

Latest Posts

ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್

- Advertisement -

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಆಗಸ್ಟ್ 29ಕ್ಕೆ ವಿಚಾರಣೆಯನ್ನು ಮುಂದೂಡಿ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ಸಿಎಂ 10 ದಿನಗಳ ಕಾಲ ನಿರಾಳವಾಗಿರಬಹುದು. ಇದೇ ವೇಳೆ ಜನಪ್ರತಿನಿಧಿಗಳ ಕೋರ್ಟ್​ನ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಸೂಚಿಸಿದೆ.
ಸಿದ್ದರಾಮಯ್ಯ ಪರ ಖ್ಯಾತ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಿದ್ರು. ಕ್ಯಾಬಿನೆಟ್ ಸಲಹೆ ತಿರಸ್ಕರಿಸಿ ರಾಜ್ಯಪಾಲರು ಆದೇಶ ನೀಡುವಂತಿಲ್ಲ. ಅಲ್ಲದೇ, ಹಾದಿ ಬೀದಿಯಲ್ಲಿ ಹೋಗೋರ ದೂರಗಳಿಗೆ ರಾಜ್ಯಪಾಲರು ಯಾಕೆ ಮನ್ನಣೆ ನೀಡಿದ್ರು ಎಂದು ಸಿಂಘ್ವಿ ಪ್ರಶ್ನೆ ಮಾಡಿದ್ರು. ರಾಜ್ಯಪಾಲರು 17A ಅಡಿಯಲ್ಲಿ ಅನುಮತಿ ನೀಡಿದ್ದಾರೆ. ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್​ಗೆ ನೀಡುವ ಅಧಿಕಾರ ಇದೆ. ಆದರೆ ಒಂದು ಲೈನ್ ನಲ್ಲಿ ಕ್ಯಾಬಿನೆಟ್ ನಿರ್ಧಾರವನ್ನ ತಿರಸ್ಕರಿಲು ಸಾಧ್ಯವಿಲ್ಲ. ಹೊಸ ಬಿಎನ್ಎಸ್ ಕಾಯ್ದೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ತಮ್ಮ ಕರ್ತವ್ಯದ ಭಾಗವಾಗಿ ಸಿಎಂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಆದರೂ ವಿವೇಚನಾರಹಿತರಾಗಿ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇಲ್ಲಿ ಪ್ರೆಂಡ್ಲಿ ಗೌರ್ನರ್ ಏಕೆ ಈ ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ಕ್ಯಾಬಿನೆಟ್ ಸಭೆಯು ವಕೀಲರ ಸಲಹೆ ಪಡೆದಿದೆ. ವಕೀಲರ ಸಲಹೆ ಪಡೆಯುವುದು ತಪ್ಪೇ? ಅಂತಾ ಅಭಿಷೇಕ್ ಪ್ರಶ್ನಿಸಿದ್ರು. ಸಿಂಘ್ವಿ ವಾದ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ಆ ಪ್ರಕರಣದಲ್ಲಿ ಕ್ಯಾಬಿನೆಟ್ ತೀರ್ಮಾನ ಪರಿಗಣಿಸುವುದು ಕರ್ತವ್ಯವಾಗಿತ್ತು. ಈ ಪ್ರಕರಣದಲ್ಲಿ ರಾಜ್ಯಪಾಲರೇ ಸ್ವತಃ ತೀರ್ಮಾನ ಕೈಗೊಳ್ಳಬೇಕಿತ್ತಲ್ಲವೇ. ಆದರೆ ವಿವೇಚನೆ ಬಳಸಿದ್ದಾರೆಯೇ ಎಂಬುದರ ಬಗ್ಗೆ ಪರಿಶೀಲಿಸಬೇಕಿದೆ ಎಂದು ಹೇಳಿದ್ರು.

ಇದೇ ವೇಳೆ ಯಡಿಯೂರಪ್ಪ ಪ್ರಕರಣ ಉಲ್ಲೇಖ ಮಾಡಿದ ಸಿಂಘ್ವಿ ಅವರು, 1992 ರಲ್ಲಿ ಮುಡಾ ಸ್ವಾಧೀನ ಆಗಿದೆ. 1998ರಲ್ಲಿ ಡಿನೋಟಿಫಿಕೇಷನ್ ಆಗಿದೆ. 2004 ರಲ್ಲಿ ಸಿಎಂ ಮೈದುನನಿಗೆ ಮಾರಾಟವಾಗಿದೆ. 2005 ರಲ್ಲಿ ಕೃಷಿ ಜಮೀನಾಗಿ ಪರಿವರ್ತಿಸಲಾಗಿದೆ. 2010 ರಂದು ಸಿಎಂ ಪತ್ನಿಗೆ ಸಹೋದರ ದಾನಪತ್ರ ನೀಡಿದ್ದಾರೆ. ಈ ಎಲ್ಲಾ ಸಂದರ್ಭದಲ್ಲೂ ಸಿದ್ದರಾಮಯ್ಯ ಅಧಿಕಾರದಲ್ಲಿರಲಿಲ್ಲ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸಿಎಂ ಪತ್ನಿ ಸೈಟ್ ಕೊಡಲಾಗಿದೆ ಎಂದು ಅಭಿಷೇಕ್ ಮನುಸಿಂಘ್ವಿ ವಾದಿಸಿದ್ರು.
ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಕ್ಯಾಬಿನೆಟ್ ನಿರ್ಣಯದ ಉದ್ದೇಶ ಸಿಎಂ ಅನ್ನು ರಕ್ಷಿಸುವುದಾಗಿರಬಹುದು. ಹೀಗಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ವಿಚಾರದಲ್ಲಿ ರಾಜ್ಯಪಾಲರಿಗೆ ಸ್ವತಂತ್ರ ಅಧಿಕಾರವಿದೆ ಎಂದು ವಾದಿಸಿದ್ರು.


ಇದೇ ವೇಳೆ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶಕ್ಕೆ ತಡೆ ನೀಡಬಾರದು ಎಂದು ಮನವಿ ಮಾಡಿದರು. ಈ ವೇಳೆ ಅಭಿಷೇಕ್ ಸಿಂಘ್ವಿ ಮಧ್ಯೆ ಪ್ರವೇಶಿಸಿ, ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಕಾಯ್ಡಿರಿಸಿದೆ. ಆದೇಶ ನೀಡಿದರೆ ಸಮಸ್ಯೆ ಆಗಲಿದೆ ಎಂದರು. ಈ ವೇಳೆ ಜಡ್ಜ್‌ ಪ್ರತಿಕ್ರಿಯಿಸಿ, ರಾಜ್ಯಪಾಲರ ಆದೇಶದ ಬಗ್ಗೆ ಸೆಷನ್ಸ್ ಕೋರ್ಟ್ ತೀರ್ಮಾನ ಮಾಡಲು ಸಾಧ್ಯವೇ? ಸಾಂವಿಧಾನಿಕ ವಿಚಾರವನ್ನು ಹೈಕೋರ್ಟ್ ತೀರ್ಮಾನ ಮಾಡಬೇಕು ಎಂದು ಹೇಳಿದರು. ಬಳಿಕ ಅರ್ಜಿ ವಿಚಾರಣೆಯನ್ನು ಆ.29ಕ್ಕೆ ಮುಂದೂಡಿದರು.

- Advertisement -

Latest Posts

Don't Miss