- Advertisement -
www.karnatakatv.net: ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೋಷನ್ ಬೇಗ್ ಅವರ ಆಸ್ತಿಯನ್ನ ಇನ್ನೂ ಜಪ್ತಿ ಮಾಡಿಲ್ಲವೇಕೆ ಎಂದು ಹೈಕೋರ್ಟ್ ಸರ್ಕಾರವನ್ನ ಪ್ರಶ್ನೆ ಮಾಡಿದೆ. ಐಎಂಎ ಠೇವಣಿದಾರರ ಹಣವನ್ನೇ ಸರ್ಕಾರಿ ಶಾಲೆಯೊಂದಕ್ಕೆ ದೇಣಿಗೆ ಪಡೆದಿರುವುದಕ್ಕೆ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತ ಪಡಿಸಿದೆ. ಸಂಸ್ಥೆಯ ಆಸ್ತಿ ರಕ್ಷಣೆಗೆ ಸರ್ಕಾರ ಆಸಕ್ತಿ ತೋರುತ್ತಿರುವಂತೆ ಕಾಣುತ್ತಿದೆ ಎಂದು ಹೇಳಿದೆ. ಐಎಂಎಯಿಂದ ರೂ. 10 ಕೋಟಿ ದೇಣಿಗೆ ಪಡೆದಿರುವುದು ಮತ್ತು ಆಸ್ತಿ ಜಪ್ತಿ ಮಾಡುವ ಬಗ್ಗೆ ಸರ್ಕಾರ ತನ್ನ ನಿಲುವನ್ನು ಪ್ರಕಟಿಸಬೇಕು ಎಂದು ವಿಚಾರಣೆಯನ್ನ ಜುಲೈ 19ಕ್ಕೆ ಮುಂದೂಡಿದೆ.
- Advertisement -