Wednesday, April 23, 2025

Latest Posts

ಜಲಶಕ್ತಿ ಯೋಜನೆಗೆ ದೇಶದಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ: ಸಚಿವ ಕೆ.ಎಸ್.ಈಶ್ವರಪ್ಪ

- Advertisement -

www.karnatakatv.net : ಬೆಳಗಾವಿ: ರಾಜ್ಯವು ಜಲಶಕ್ತಿ ಅಭಿಯಾನ ಪ್ರಾರಂಭವಾರ ಮಾ. 22 ರಿಂದ  ಇಲ್ಲಿಯವರೆಗೆ ಒಟ್ಟು 4.87 ಲಕ್ಷ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.  ಅದರಲ್ಲಿ 2.38 ಲಕ್ಷ ಕಾಮಗಾರಿ ಪೂರ್ಣಗಿಳಿಸುವ ಮೂಲಕ ದೇಶದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ ಎಂದರು.

ಬುಧವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಜಲಶಕ್ತಿ ಅಭಿಯಾನದಲ್ಲಿ ಕರ್ನಾಟಕಕ್ಕೆ ದೇಶದಲ್ಲಿ ಮೊದಲೇ ಸ್ಥಾನ ಬಂದಿದೆ. ಇದು ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ವೆಚ್ಚದಲ್ಲಿ ಶೇ.65ರಷ್ಟು ನೈಸರ್ಗಿಕ ಸಂಪನ್ಮೂಲಗಳ ನಿರ್ವಹಣೆ ಕಾಮಗಾರಿಗಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ.

ಬೆಳಗಾವಿಯಲ್ಲಿ 240 ಹೊಸ ಕೆರೆಗಳನ್ನು ನಿರ್ಮಾಣವನ್ನು ಕೈಗೊಳ್ಳಲಾಗಿದೆ. ಅಲ್ಲದೆ, ಕಲಬುರಗಿ, ಮಂಡ್ಯ ಮತ್ತು ರಾಮನಗರದಲ್ಲಿ ನೂರಾರು ಕಲ್ಯಾಣಿಗಳ ಪುನಶ್ಚೇತನಕ್ಕೆ ಆಧ್ಯತೆ ನೀಡಲಾಗಿದೆ ಎಂದರು. ಪ್ರಸಕ್ತ ಸಾಲಿನ ಯೋಜನೆಯಲ್ಲಿ ಇಲ್ಲಿಯವರೆಗೆ ಒಟ್ಟು 29,34,32 ಕೋಟಿ ರೂ. ವೆಚ್ಚ ಮಾಡಿದ್ದು, ಅದರಲ್ಲಿ 2408,50 ಕೋಟಿ ರೂ.ಗಳನ್ನು ಜಲಶಕ್ತಿ ಅಭಿಯಾನಕ್ಕೆ ವೆಚ್ಚ ಮಾಡಲಾಗಿದೆ ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷ, ಪಿಡಿಒಗಳಿಗೆ  ಗ್ರಾಮೀಣಾಭಿವೃದ್ಧಿ ಇಲಾಖೆಯ ಯೋಜನೆಯ ಬಗ್ಗೆ ಜನರಿಗೆ ತಿಳಿ ಹೇಳಲು ತರಬೇತಿ ನೀಡಲಾಗುವುದು‌.  ರಾಜ್ಯ ಸರಕಾರದ ಒಂದು ವರ್ಷ ಹತ್ತು ತಿಂಗಳ ಅವಧಿಯಲ್ಲಿ ರಾಜ್ಯದ ಇಡಿ ಕೆರೆಗಳನ್ನು ಅಭಿವೃದ್ಧಿ ಮಾಡುವ ಗುರಿಯನ್ನು ಹೊಂದಿದ್ದೇವೆ ಎಂದರು. ವಿಧಾನ ಪರಿಷತ್ತಿನ ಸದಸ್ಯ ಮಹಾಂತೇಶ ಕವಟಗಿಮಠ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಾಗೇಶ್ ಕರ್ನಾಟಕ ಟಿವಿ ಬೆಳಗಾವಿ

- Advertisement -

Latest Posts

Don't Miss