Monday, April 14, 2025

Latest Posts

ನೀರು ಕೊಡದಿದ್ದರೆ ಕರ್ನಾಟಕಕ್ಕೆ ಹೋಗುತ್ತೇವೆ : ಮಹಾರಾಷ್ಟ್ರದ ಜತ್ತ ತಾಲೂಕಿನ ಜನರ ಕೂಗು

- Advertisement -

ಬೆಳಗಾವಿ: ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ತ ತಾಲೂಕಿನ ಉಮದಿ ಗ್ರಾಮದ ಜನರು ನೀರಾವರಿ ಹೋರಾಟ ಸಮಿತಿ ನೇತೃತ್ವದಲ್ಲಿ 42 ಹಳ್ಳಿಗಳ ಜನರು ಉಮದಿ ಗ್ರಾಮದಲ್ಲಿ ಸಭೆ ಸೇರಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ, ಸೊಲ್ಲಾಪುರ ಕರ್ನಾಟಕಕ್ಕೆ ಸೇರಬೇಕು ಎಂಬ ಸಿಎಂ ಬಸವರಾಜ ಹೇಳಿಕೆಯಿಂದ ಮಹಾರಾಷ್ಟ್ರದಲ್ಲಿ ಸಂಚಲನ ಸೃಷ್ಠಿಯಾಗಿದೆ.

ಇಂದು ಸುಪ್ರೀಂಕೋರ್ಟ್ ನಲ್ಲಿ ಆಯೋಜಿಸಲಾದ ಸಂವಿಧಾನ ದಿನಾಚರಣೆಯಲ್ಲಿ ಮೋದಿ ಭಾಗಿ : ವಿವಿಧ ಯೋಜನೆಗಳೆಗೆ ಚಾಲನೆ

ಉಮದಿ ಗ್ರಾಮದ ಜನರು ತಡರಾತ್ರಿವರೆಗೂ ಸಭೆ ನಡೆಸಿದ್ದಾರೆ. 6 ದಶಕಗಳಿಂದ  ನೀರಿನ ಸಮಸ್ಯೆಯಿಂದ ಕಂಗೆಟ್ಟ ಜನರು ಸಭೆ ನಡೆಸಿ ಅನೇಕ ವಿಚಾರಗಳನ್ನು ಚರ್ಚಿಸಿದ್ದಾರೆ. ನಂತರ ಮಹಾರಾಷ್ಟ್ರ ಸರ್ಕಾರಕ್ಕೆ ಎಂಟು ದಿನಗಳ ಗಡುವು ನೀಡಿದ್ದಾರೆ. 8 ದಿನದೊಳಗೆ ನಿರ್ಧಾರ ತೆಗೆದುಕೊಳ್ಳದಿದ್ದಲ್ಲಿ ಕರ್ನಾಟಕ ಸೇರಲು ನಿರ್ಧಾರ ಪ್ರಕಟಿಸುತ್ತೇವೆ. ಕರ್ನಾಟಕ ಸಿಎಂ ರನ್ನು ಜತ್ತ ತಾಲೂಕಿನ ಕರೆಸಿಕೊಂಡು ನಮ್ಮ ನಿರ್ಧಾರವನ್ನು ಹೇಳುತ್ತೇವೆ ಎಂದು ಗ್ರಾಮಸ್ಥರು ಹೇಳಿದರು.

ಸೀಮೆಸುಣ್ಣ ಮುರಿದಿದ್ದಕ್ಕೆ, ವಿದ್ಯಾರ್ಥಿ ಕೈ ಕಟ್ ಆಗುವ ಹಾಗೆ ಥಳಿಸಿದ ಶಿಕ್ಷಕ

ಇಂಡೋನೇಷ್ಯಾದಲ್ಲಿ ಭೂಕಂಪ : ಸಾವಿನ ಸಂಖ್ಯೆ 310ಕ್ಕೆ ಏರಿಕೆ, 24 ಜನ ನಾಪತ್ತೆ

- Advertisement -

Latest Posts

Don't Miss